ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಉದ್ಯಮಿ ವಿಜಯ್ ನಾಯರ್ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದ್ದು, ಇಂದು ಸೋಮವಾರ ಜಾಮೀನು ಮಂಜೂರು ಮಾಡಿದೆ.
ವಿಜಯ್ ನಾಯರ್ ಅವರು ಜಾಮೀನಿಗಾಗಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಆಮ್ ಆದ್ಮಿ ಪಕ್ಷದ (ಎಎಪಿ) ಮಾಜಿ ಸಂವಹನ ಉಸ್ತುವಾರಿ ಮತ್ತು ಉದ್ಯಮಿ ವಿಜಯ್ ನಾಯರ್ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ ಜಾಮೀನು ನೀಡಿದೆ.