ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಡಿಸೆಂಬರ್ 29ರ 06 ಗಂಟೆಯಿಂದ 30 ರ ಮಧ್ಯರಾತ್ರಿ 12.00 ಗಂಟೆಯವರೆಗೆ ಮೈಸೂರು ಜಿಲ್ಲೆಯ ಕೆ.ಆರ್.ನಗರ ಟೌನ್ ಸರಹದ್ದಿನಲ್ಲಿರುವ ವೈನ್ ಶಾಪ್, ಬಾರ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಡಿಸೆಂಬರ್ 24 ರಿಂದ 30 ರವರೆಗೆ ಮೈಸೂರು ಜಿಲ್ಲಾ ವ್ಯಾಪ್ತಿಯ ಕೆ.ಆರ್.ನಗರ ಟೌನ್ ಆಂಜನೇಯ ಬ್ಲಾಕ್‌ನಲ್ಲಿ ಹನುಮ ಜಯಂತಿ ಕಾರ್ಯಕ್ರಮಗಳು ನಡೆಯಲಿದ್ದು, ಡಿಸೆಂಬರ್ 30 ರಂದು ಹನುಮ ಮೂರ್ತಿಯ ಮೆರವಣಿಗೆ ನಡೆಯಲಿದ್ದು, ಮೆರವಣಿಗೆಯು ಕೆ.ಆರ್.ನಗರ ಟೌನ್ ಆಂಜನೇಯಸ್ವಾಮಿ ದೇವಸ್ಥಾನದಿಂದ ಹೊರಟು, ಬಜಾರ್ ರಸ್ತೆ, ಗರುಡಗಂಭ ಸರ್ಕಲ್, ವಿವಿ ರಸ್ತೆ, ಪುರಸಭೆ ಸರ್ಕಲ್, ಸಿ.ಎಂ ರಸ್ತೆ ಮೂಲಕ ವಾಪಸ್ಸು ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಆಗಮಿಸಿ ಮುಕ್ತಾಯವಾಗಲಿದೆ.

ಸುಮಾರು 10.000 ಜನರು ಭಾಗವಹಿಸುವುದಾಗಿ ತಿಳಿದು ಬಂದಿದೆ, ಕೆ.ಆರ್.ನಗರ ಪಟ್ಟಣವು ಮತೀಯವಾಗಿ ಸೂಕ್ಷ್ಮ ಪ್ರದೇಶವಾಗಿದ್ದು, ಮೆರವಣಿಗೆಯಲ್ಲಿ ಕಾರ್ಯಕರ್ತರು ಮದ್ಯಪಾನ ಮಾಡಿಕೊಂಡು ಬರುವ ಸಾಧ್ಯತೆಗಳಿರುವುದರಿಂದ ಕೆ.ಆರ್.ನಗರ ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಡಿಸೆಂಬರ್ 29ರ 06 ಗಂಟೆಯಿಂದ 30 ರ ಮಧ್ಯರಾತ್ರಿ 12.00 ಗಂಟೆಯವರೆಗೆ ಮೈಸೂರು ಜಿಲ್ಲೆ ಕೆ.ಆರ್.ನಗರ ಟೌನ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಜಿಲ್ಲಾಧಿಕಾರಿಗಳು ಮನವಿ ಸಲ್ಲಿಸಿದ್ದರು
ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಸ್ತಾವನೆಯನ್ನು ಪರಿಶೀಲಿಸಲಾಗಿ ಕೆ.ಆರ್.ನಗರ ಪಟ್ಟಣದಲ್ಲಿ ಹನುಮ ಜಯಂತಿ ಕಾರ್ಯಕ್ರಮ ನಡೆಯಲಿರುವ ಸಂಬಂಧ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಮುನ್ನೆಚ್ಚರಿಕೆ ಕ್ರಮವಾಗಿ ಡಿಸೆಂಬರ್ 29ರ 06 ಗಂಟೆಯಿಂದ 30 ರ ಮಧ್ಯರಾತ್ರಿ 12.00 ಗಂಟೆಯವರೆಗೆ ಕೆ.ಆರ್.ನಗರ ಟೌನ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸುವುದು ಅಗತ್ಯವಿರುವುದನ್ನು ಮನಗಂಡು ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.