Monday, April 7, 2025
Google search engine

Homeರಾಜ್ಯಸುದ್ದಿಜಾಲಜೈಲಿನಲ್ಲಿ ಸಾಕ್ಷರತಾ ದಿನಾಚರಣೆ

ಜೈಲಿನಲ್ಲಿ ಸಾಕ್ಷರತಾ ದಿನಾಚರಣೆ

ಉಡುಪಿ: ಕೇಂದ್ರ ಸರ್ಕಾರದ ಉಲ್ಲಾಸ್ ನವ ಭಾರತ ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲಾ ಕಾರಾಗೃಹದಲ್ಲಿ 8 ಅನಕ್ಷರಸ್ಥರನ್ನು ಗುರುತಿಸಲಾಗಿದೆ. ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯಲ್ಲಿ ಕೈದಿಗಳಿಗೆ ವಯಸ್ಕ ಶಿಕ್ಷಣ ಇಲಾಖೆಯ ಪಠ್ಯಪುಸ್ತಕ ಬೆಳಕು ಮತ್ತು ಬರವಣಿಗೆ ಪುಸ್ತಕ ಸಿಹಿ ಬರಹ ಎಂಬ ಪಠ್ಯಪುಸ್ತಕವನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ವಯಸ್ಕ ಶಿಕ್ಷಣಾಧಿಕಾರಿ ಯೋಗಾನರಸಿಂಹಸ್ವಾಮಿ. ಕೆ.ಎಂ, ಕೈದಿಗಳಿಗೆ ದೈನಂದಿನ ಜೀವನದಲ್ಲಿ ಶಿಕ್ಷಣದ ಪಾತ್ರ ಮತ್ತು ಅಗತ್ಯದ ಬಗ್ಗೆ ತಿಳಿಸಿದರು. ಸಹಾಯಕಿ ಶ್ವೇತಾ, ಜಿಲ್ಲಾ ಕಾರಾಗೃಹ ಅಧೀಕ್ಷಕ ಸಿದ್ದರಾಮ ಪಾಟೀಲ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular