Sunday, April 20, 2025
Google search engine

Homeಅಪರಾಧಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ ಸಾಹಿತಿ,ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ ಆತ್ಮಹತ್ಯೆ

ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿ ಸಾಹಿತಿ,ಪರಿಸರವಾದಿ ಭೂಹಳ್ಳಿ ಪುಟ್ಟಸ್ವಾಮಿ ಆತ್ಮಹತ್ಯೆ

ಮೈಸೂರು: ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿ ಸಾಹಿತಿ ಹಾಗೂ ಪರಿಸರವಾದಿ ತಾಲ್ಲೂಕಿನ ಭೂಹಳ್ಳಿ ಪುಟ್ಟಸ್ವಾಮಿ (೭೬) ಅವರು ನಿನ್ನೆ ರಾತ್ರಿ ಚನ್ನಪಟ್ಟಣದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ನನ್ನ ಸಾವಿಗೆ ನಾನೇ ಕಾರಣ. ಅನಾರೋಗ್ಯದಿಂದ ಬೇಸರಗೊಂಡ ಜೀವನ ಯಾತ್ರೆ ಮುಗಿಸುತ್ತಿದ್ದೇನೆ. ೨೮.೦೭.೨೪ ರಾತ್ರಿ ೨.೪೦ ಇತಿ ಭೂಹಳ್ಳಿ ಪುಟ್ಟಸ್ವಾಮಿ’ ಎಂದು ಪೋಸ್ಟ್ ಮಾಡಿ ಚನ್ನಪಟ್ಟಣದಲ್ಲಿ ನೇಣಿಗೆ ಶರಣಾಗಿದ್ದಾರೆ. ಪುಟ್ಟಸ್ವಾಮಿ ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರಿದ್ದಾರೆ. ಪುಟ್ಟಸ್ವಾಮಿ ಅವರ ಕುಟುಂಬ ಮೈಸೂರಿನಲ್ಲಿ ನೆಲೆಸಿತ್ತು.ಆದರೆ, ಪುಟ್ಟಸ್ವಾಮಿ ಅವರು ಮಾತ್ರ ಚನ್ನಪಟ್ಟಣದಲ್ಲಿ ಬಾಡಿಗೆ ಮನೆ ಮಾಡಿಕೊಂಡು ವಾಸವಾಗಿದ್ದರು. ಆಗಾಗ ಮೈಸೂರಿಗೆ ಹೋಗಿ ಬರುತ್ತಿದ್ದರು.

ಸ್ವಗ್ರಾಮದಲ್ಲಿ ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.ವೃತ್ತಿಯಲ್ಲಿ ಇತಿಹಾಸ ಉಪನ್ಯಾಸಕರಾಗಿದ್ದ ಪುಟ್ಟಸ್ವಾಮಿ ಅವರು ಪ್ರವೃತ್ತಿಯಲ್ಲಿ ಸಾಹಿತಿಯಾಗಿದ್ದರು.

RELATED ARTICLES
- Advertisment -
Google search engine

Most Popular