ಮಂಗಳೂರು (ದಕ್ಷಿಣ ಕನ್ನಡ): ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇ.ವಿ.ಎಂ ಭದ್ರತಾ ಕೇಂದ್ರದ ಪೂರ್ವಸಿದ್ದತೆಗಳ ಪರಿಶೀಲನೆಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎಂ.ಪಿ ಮುಲೈ ಮುಹಿಲನ್, ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ ವಾಲ್ ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಸಿ.ಬಿ ರಿಷ್ಯಂತ್ ಅವರು ಸುರತ್ಕಲ್ ಎನ್.ಐ.ಟಿ.ಕೆ ಇಂಜಿನಿಯರಿಂಗ್ ಕಾಲೇಜಿಗೆ ತೆರಳಿ ಪರಿಶೀಲನೆ ನಡೆಸಿದರು.
