Sunday, April 20, 2025
Google search engine

Homeಸ್ಥಳೀಯಲೋಕಸಭಾ ಚುನಾವಣೆ: ಜನರಲ್ಲಿ ಮತದಾನದ ಬಗ್ಗೆ ಜಾಗೃತಿ

ಲೋಕಸಭಾ ಚುನಾವಣೆ: ಜನರಲ್ಲಿ ಮತದಾನದ ಬಗ್ಗೆ ಜಾಗೃತಿ


ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಏ.೨೬ ರಂದು ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜನರಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಕಾರ್ಯ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದು ಕೆ.ಆರ್.ನಗರ ವಿಧಾನಸಭಾ ಕ್ಷೇತ್ರದಲ್ಲಿ ಗರಿಷ್ಠ ಪ್ರಮಾಣದ ಮತದಾರರನ್ನು ಮತಗಟ್ಟೆಗೆ ಸೆಳೆಯಲು ಹಲವು ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದುತಾಲ್ಲೂಕು ಸಮಾಜಕಲ್ಯಾಧಿಕಾರಿ ಆಶೋಕ್ ಕುಮಾರ್ ಹೇಳಿದರು.

ಪಟ್ಟಣದ ಸಮಾಜಕಲ್ಯಾಣ ಇಲಾಖೆ ಸಿಬ್ಬಂದಿಗಳು ಹಾಗೂ ಟೌನ್ ಸ್ವಿಪ್ ಸಮಿತಿಯ ಅಧ್ಯಕ್ಷ ಪುರಸಭಾ ಮುಖ್ಯಾಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಮೆಟ್ರಿಕ್ ನಂತರದ ಬಾಲಕರ, ಬಾಲಕಿಯರ ವಿಧ್ಯಾರ್ಥಿನಿಲಯಗಳ ವತಿಯಿಂದ ಲೋಕಸಭಾ ಚುನಾವಣೆಯ ಜಾಗೃತಿ ಜಾಥವನ್ನು ಹಮ್ಮಿಕೊಂಡಿದ್ದು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಾರ್ವಜನಿಕರಿಗೆ ಮತದಾನದ ಜಾಗೃತಿಯನ್ನು ಮೂಡಿಸಲಾಯಿತ್ತು.

ಸ್ವಿಪ್ ಸಮಿತಿಯ ಟೌನ್ ಅಧ್ಯಕ್ಷ ಪುರಸಭಾ ಮುಖ್ಯಾಧಿಕಾರಿ ಹೇಮಂತ್ ಡೊಳ್ಳೆ ಚಾಲನೆ ನೀಡಿ ಮಾತನಾಡಿ ಕಳೆದ ಬಾರಿ ಪುರಸಭಾ ವ್ಯಾಪ್ತಿಯಲ್ಲಿ ಶೇಖಡ ೭೩ ಕ್ಕಿಂತ ಕಡಿಮೆ ಮತದಾನವಾಗಿದ್ದು ಈ ಬಾರಿ ಶೇ ೧೦೦ರಷ್ಟು ಮತದಾನ ನಡೆಯಲು ಪ್ರತಿದಿನ ನಮ್ಮ ಸಿಬ್ಬಂದಿಗಳೊಂದಿಗೆ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದರು.
ಮಂಡ್ಯ ಜಿಲ್ಲಾಧಿಕಾರಿ ಮತ್ತು ಮೈಸೂರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಣಾಧಿಕಾರಿ ನೇತೃತ್ವದಲ್ಲಿ ಜಾಥವನ್ನು ಹಮ್ಮಿಕೊಂಡಿದ್ದೇವೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಮಾಜ ಕಲ್ಯಾಣಾಧಿಕಾರಿ ಕಛೇರಿ ಅಧಿಕ್ಷಕ ಜಿ.ಕೃಷ್ಣ, ಸಿಬ್ಬಂದಿಗಳಾದ ಡಿ.ರಾಣಿ, ರೇಖಾ, ಪುರಸಭೆಯ ವ್ಯವಸ್ಥಾಪಕಿ ಸುಧಾರಾಣಿ, ಪರಿಸರ ಇಂಜಿನೀಯರ್ ರಾಜೇಂದ್ರ, ಫರೀದಾ, ಸ್ವಪ್ನ, ಜ್ಞಾನೇಶ್ ಸೇರಿದಂತೆ ಇನ್ನಿತರರು ಭಾಗವಹಿಸಿದರು.

RELATED ARTICLES
- Advertisment -
Google search engine

Most Popular