ಬೆಂಗಳೂರು: ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಇಂದು ಸೋಮವಾರ ನಾಮಪತ್ರ ಸಲ್ಲಿಕೆ ಮಾಡಿದರು.
ಜಯನಗರ ಬಿಬಿಎಂಪಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ ಸೌಮ್ಯ ರೆಡ್ಡಿ, ನಾಮಪತ್ರ ಸಲ್ಲಿಕೆಗೂ ಮುನ್ನ ಜಯನಗರದ ಗಣೇಶ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು. ಪೂಜೆ ಬಳಿಕ ಮೆರವಣಿಗೆ ರೋಡ್ ಶೋ ನಡೆಸಿದರು. ರೋಡ್ ಶೋನಲ್ಲಿ ಡಿಸಿಎಂ ಡಿಕೆ ಶಿವಕುಮಾರ್, ರಾಮಲಿಂಗಾ ರೆಡ್ಡಿ, ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಗಳು, ಎಂಎಲ್‌ಸಿ ಯುಬಿ ವೆಂಕಟೇಶ್ ಭಾಗಿಯಾಗಿದ್ದರು. ನಾಮಪತ್ರ ಸಲ್ಲಿಕೆಯ ಬಳಿಕ ಮಾತನಾಡಿದ ಸೌಮ್ಯರೆಡ್ಡಿ, ಎಲ್ಲ ಕಡೆ ಮೂರು ನಾಲ್ಕುವಾರದಿಂದ ದಕ್ಷಿಣದಲ್ಲಿ ಸುತ್ತಾಡಿದ್ದೇವೆ. ಮತ್ತೊಮ್ಮೆ ಕಾಂಗ್ರೆಸ್ ಬರಬೇಕು ಅನ್ನೋದು ಜನರ ಆಶಯವಾಗಿದೆ. ಡಿಕೆ ಶಿವಕುಮಾರ್ ಕಾಂಗ್ರೆಸ್ ಶಾಸಕರು ಕಾರ್ಯಕರ್ತರು ಬಂದಿದ್ದಾರೆ ಎಂದು ಹೇಳಿದರು.