ಹೊಸದಿಲ್ಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಪಡಿಸುವ ಸಲುವಾಗಿ ಕಾಂಗ್ರೆಸ್‌ನ ಕೇಂದ್ರೀಯ ಚುನಾವಣಾ ಸಮಿತಿ ನಾಳೆ ಮಾರ್ಚ್ ೭ರಂದು ಸಭೆ ಸೇರಲಿದೆ. ಲೋಕಸಭಾ ಚುನಾವಣೆಯ ದಿನಾಂಕ ಇನ್ನೂ ಪ್ರಕಟವಾಗಬೇಕಿದೆ. ಆದರೆ ಈಗಾಗಲೇ ೧೯೫ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿರುವ ಬಿಜೆಪಿ ಒಂದು ಹೆಜ್ಜೆ ಮುಂದಿದೆ.
ಅಭ್ಯರ್ಥಿಗಳು ತಮ್ಮ ಚುನಾವಣಾ ಪ್ರಚಾರವನ್ನು ಪ್ರಾರಂಭಿಸಲು ಅನುವು ಮಾಡಿಕೊಡಲು ಪಕ್ಷವು ಶೀಘ್ರದಲ್ಲೇ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಲಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಹಲವು ರಾಜ್ಯಗಳಲ್ಲಿ ಈಗಾಗಲೇ ಆಯಾ ಸ್ಕ್ರೀನಿಂಗ್ ಕಮಿಟಿಗಳ ಜತೆ ಸಭೆಗಳನ್ನು ನಡೆಸಲಾಗಿದ್ದು, ಆಯಾ ರಾಜ್ಯಗಳ ಪಟ್ಟಿಯನ್ನು ಕಳುಹಿಸಿಕೊಟ್ಟಿವೆ ಎಂದು ತಿಳಿದುಬಂದಿದೆ. ಇದನ್ನು ಪಕ್ಷದ ಕೇಂದ್ರ ನಾಯಕತ್ವ, ಕೇಂದ್ರೀಯ ಚುನಾವಣಾ ಸಮಿತಿ ಸಭೆಯಲ್ಲಿ ಅಂತಿಮಪಡಿಸಲಿದೆ.