ಮಂಡ್ಯ: ಲೋಕ ಅಖಾಡಕ್ಕೆ ಕೈ ಪಡೆ ಸಜ್ಜಾಗಿದ್ದು, ಮಂಡ್ಯ ಜಿಲ್ಲಾ ಕಾಂಗ್ರೆಸ್ ನಿಂದ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ.
ಮಂಡ್ಯದ ಖಾಸಗಿ ಸಮುದಾಯ ಭವನದಲ್ಲಿ ನಡೆಯುತ್ತಿರುವ ಸಭೆಯನ್ನು ಸಚಿವರಾದ ಸುಧಾಕರ್, ಎನ್.ಚಲುವರಾಯಸ್ವಾಮಿ ಉದ್ಘಾಟಿಸಿದ್ದಾರೆ.
ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ರಮೇಶ್ ಬಂಡಿಸಿದ್ದೇಗೌಡ, ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ, ಮಧು ಜಿ.ಮಾದೇಗೌಡ, ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದಾರೆ.