Sunday, April 20, 2025
Google search engine

HomeUncategorizedರಾಷ್ಟ್ರೀಯಲೋಕಸಭಾ ಚುನಾವಣೆ: ತಿಂಗಳಾಂತ್ಯಕ್ಕೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಭೇಟಿ

ಲೋಕಸಭಾ ಚುನಾವಣೆ: ತಿಂಗಳಾಂತ್ಯಕ್ಕೆ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಭೇಟಿ

ಬೆಂಗಳೂರು: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದು, ಇದರಂತೆ ತಿಂಗಳಾಂತ್ಯಕ್ಕೆ ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಲೋಕಸಭೆ ಚುನಾವಣೆ ಸಿದ್ದತೆ, ಕಾರ್ಯತಂತ್ರಗಳ ಅನುಷ್ಟಾನದ ನಿಟ್ಟಿನಲ್ಲಿ ಮೋದಿ ಹಾಗೂ ಅಮಿತ್ ಶಾ ಅವರ  ಈ ಭೇಟಿ ಬಹಳ ಮಹತ್ವ ಪಡೆದುಕೊಂಡಿದೆ.

ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಈಗಾಗಲೇ 4 ಲೋಕಸಭೆ ಕ್ಷೇತ್ರಗಳಿಗೆ ಒಂದರಂತೆ ಎಂಟು ಕ್ಲಸ್ಟರ್ ಗಳನ್ನು ರಚಿಸಿದ್ದು, ಪ್ರಧಾನಿ ಮೋದಿ , ಅಮಿತ್ ಶಾ, ಜೆ,ಪಿ ನಡ್ಡಾ ಹಾಗೂ ರಾಜನಾಥ್ ಸಿಂಗ್ ತಲಾ 2 ಕ್ಲಸ್ಟರ್ ಗಳ ಮೇಲ್ವಿಚಾರಣೆ ಮಾಡಲಿದ್ದಾರೆ.

2019 ರ ಚುನಾವಣೆಯಲ್ಲಿ ಬಿಜೆಪಿ ರಾಜ್ಯದಲ್ಲಿ ಒಟ್ಟು 28 ಲೋಕಸಭಾ ಸ್ಥಾನಗಳಲ್ಲಿ 25 ಸ್ಥಾನಗಳಲ್ಲಿ ಗೆಲುವು ಸಾಧಿಸಿತ್ತು. ಈ ಬಾರಿ ಸ್ಥಾನಗಳನ್ನು ಉಳಿಸಿಕೊಳ್ಳುವುದರ ಜೊತೆಗೆ ಮತ್ತಷ್ಟು ಕ್ಷೇತ್ರಗಳಲ್ಲಿಯೂ ಗೆಲುವು ಸಾಧಿಸಲು ಬಿಜೆಪಿ ತಂತ್ರ ರೂಪಿಸುತ್ತಿದೆ.

ಬಿಜೆಪಿ JD(S) ಜೊತೆ ಮೈತ್ರಿ ಮಾಡಿಕೊಂಡ ನಂತರ ಶಾ ಅವರ ಮೊದಲ ಭೇಟಿ ಇದಾಗಿದೆ. ಪಕ್ಷವು ಬಿ ವೈ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮತ್ತು ಆರ್ ಅಶೋಕ ಅವರನ್ನು ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಿಸಿದೆ.

RELATED ARTICLES
- Advertisment -
Google search engine

Most Popular