Friday, April 18, 2025
Google search engine

Homeಸ್ಥಳೀಯಲೋಕಸಭಾ ಚುನಾವಣೆ: ಜೆಡಿಎಸ್ ಕಾರ್ಯಕರ್ತರಿಗೆ ಟಾರ್ಗೆಟ್, ಜಿ.ಟಿ ದೇವೇಗೌಡ

ಲೋಕಸಭಾ ಚುನಾವಣೆ: ಜೆಡಿಎಸ್ ಕಾರ್ಯಕರ್ತರಿಗೆ ಟಾರ್ಗೆಟ್, ಜಿ.ಟಿ ದೇವೇಗೌಡ

ಮೈಸೂರು: ಜೆಡಿಎಸ್ ಕಾರ್ಯಕರ್ತರನ್ನು ಟಾರ್ಗೆಟ್ ಮಾಡಿ ಎಫ್‌ಐಆರ್ ಹಾಕಿಸುತ್ತಿದ್ದಾರೆ ಎಂದು ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಕಾರ್ಯಕರ್ತರಿಗೆ ರಕ್ಷಣೆ ಸಿಗುತ್ತಿಲ್ಲ, ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ್ನು ಸೋಲಿಸಬೇಕು. ಇದೇ ಕಾರಣಕ್ಕೆ ಬಿಜೆಪಿ ಜೊತೆ ಮೈತ್ರಿಗೆ ಎಲ್ಲರೂ ಒಲವು ಹೊಂದಿದ್ದಾರೆ ಎಂದರು.


ಚುನಾವಣೆಯನ್ನು ಒಟ್ಟಾಗಿ ಎದುರಿಸೋಣ ಎನ್ನುವುದು ಒಮ್ಮತದ ಅಭಿಪ್ರಾಯವಾಗಿದೆ. ಕಾಂಗ್ರೆಸ್ ಜೊತೆ ಹೋಗಲು ನಮಗೆ ಇಷ್ಟವಿಲ್ಲ. ಹೊಟ್ಟೆ ಉರಿಯಿಂದ ಹೆಚ್‌ಡಿ ಕುಮಾರಸ್ವಾಮಿಯವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರು. ಕಾಂಗ್ರೆಸ್ ಹೊಡೆತ ತಡೆಯಲು ಆಗುತ್ತಿಲ್ಲ. ಸೆಪ್ಟೆಂಬರ್ ೧೦ರಂದು ಬೆಂಗಳೂರಿನ ಅರಮನೆ ಜೆಡಿಎಸ್ ಮೈದಾನದಲ್ಲಿ ಸಮಾವೇಶ ಹಮ್ಮಿಕೊಂಡಿದ್ದೇವೆ. ಈ ಮೂಲಕ ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇವೆ ಎಂದರು. ಈ ವೇಳೆ ಸಭೆಯಲ್ಲಿ ಹೆಚ್ ಡಿ ದೇವೇಗೌಡರು, ಸಿಎಂ ಇಬ್ರಾಹಿಂ ಮತ್ತು ಹೆಚ್ ಡಿ ರೇವಣ್ಣ ಸೇರಿ ಎಲ್ಲರೂ ಭಾಗಿಯಾಗಲಿದ್ದಾರೆ.

ಮೈತ್ರಿ ಬಳಿಕ ಸ್ಥಾನಗಳ ಹಂಚಿಕೆ ಅಳತೆಗೋಲಿನಿಂದ ಮಾಡಬೇಕು. ಈ ವೇಳೆ ನಾನು ಕಾರ್ಯಕರ್ತರು, ಮುಖಂಡರ ಅಭಿಪ್ರಾಯದ ಪರ ಇರುತ್ತೇನೆ. ಈ ಹಿಂದೆ ಬಿಜೆಪಿ ಜೊತೆ ಹೋಗಿದಕ್ಕೆ ನನ್ನನ್ನೇ ಜನರು ಹುಣಸೂರಿನಲ್ಲಿ ನನ್ನನ್ನು ಸೋಲಿಸಿದ್ದರು, ಈಗ ಪರಿಸ್ಥಿತಿ ಬದಲಾಗಿದೆ. ರಾಜ್ಯದಲ್ಲಿ ಜನ ಕಾಂಗ್ರೆಸ್ ಪಕ್ಷದ ವಿರುದ್ಧ ದಂಗೆ ಎದ್ದಿದ್ದಾರೆ ಎಂದು ಮೈಸೂರಿನಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ ದೇವೇಗೌಡ ಹೇಳಿದರು.

RELATED ARTICLES
- Advertisment -
Google search engine

Most Popular