Monday, April 21, 2025
Google search engine

Homeಸ್ಥಳೀಯಲೋಕಸಭಾ ಚುನಾವಣೆ- ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಲೋಕಸಭಾ ಚುನಾವಣೆ- ಅಧಿಕಾರಿಗಳಿಗೆ ತರಬೇತಿ ಕಾರ್ಯಾಗಾರ

ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಅನುಸರಿಸಲು ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಲೋಕಸಭಾ ಚುನಾವಣೆ ಸಂಬಂಧಿಸಿದಂತೆ ಎಫ್ಎಸ್ ಟಿ, ಎಸ್ಎಸ್ ಟಿ, ವಿಎಸ್ ಟಿ ಸೇರಿದಂತೆ ವಿವಿಧ ತಂಡಗಳಿಗೆ ಚುನಾವಣಾ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ  ಚುನಾವಣಾ ಕರ್ತವ್ಯ ನಿರ್ವಹಿಸಬೇಕು ಹಾಗೂ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಅವರು ತಿಳಿಸಿದರು.

ಅವರು ಇಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಅಂಗವಾಗಿ ಎಫ್‌ಎಸ್‌ಟಿ, ಎಸ್‌ಎಸ್‌ಟಿ ಮತ್ತು ವಿವಿಟಿ ತಂಡದ ಮುಖ್ಯಸ್ಥರಿಗೆ ಮಾದರಿ ನೀತಿ ಸಂಹಿತೆ (ಎಂಸಿಸಿ) ಕುರಿತು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತರಬೇತಿಯಲ್ಲಿ ಅನೇಕ ಸಲಹೆ ಸೂಚನೆ ನೀಡಿದರು.

 ಜಿಲ್ಲೆಯಾದ್ಯಂತ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಪ್ರತಿಯೊಂದು ವಾಹನಗಳನ್ನು ಪರಿಶೀಲಿಸಬೇಕು. ಪರಿಶೀಲನೆಯ ಸಂದರ್ಭದಲ್ಲಿ ಯಾವುದೇ ವಾಹನದಲ್ಲಿ 50 ಸಾವಿರಕ್ಕಿಂತ ಹೆಚ್ಚಿನ ಹಣ ಸಾಗಿಸುತ್ತಿರುವುದು ಕಂಡುಬಂದರೆ ಅಂತಹ ವಾಹನಗಳನ್ನು ವಶಪಡಿಸಿಕೊಳ್ಳಬೇಕು ಎಂದರು.

 ಹಣವಲ್ಲದೆ ಪಕ್ಷದ ಗುರುತಿರುವ ಟಿ-ಶರ್ಟ್, ಕ್ಯಾಪ್, ಹೆಚ್ಚಿನ ಸಂಖ್ಯೆಯ ಸೀರೆ, ಆಹಾರದ ಕಿಟ್ ಇತ್ಯಾದಿ ರೀತಿಯ ಅಕ್ರಮ ವಸ್ತುಗಳ ಸಾಗಾಣಿಕೆ ಕಂಡುಬಂದರೆ ಅವುಗಳನ್ನು ವಶಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಚುನಾವಣೆಯ ಸಂದರ್ಭವಾದ್ದರಿಂದ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳು  ಕಂಡು ಬಂದ ಸಂದರ್ಭದಲ್ಲಿ  ಅಧಿಕಾರಿಗಳು ಜಾಗರುಕರಾಗಿರಬೇಕು ಹಾಗೂ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಅನುಸರಿಸಿ ಅಗತ್ಯ ಕ್ರಮ ವಹಿಸಬೇಕು ಎಂದರು.

ಸಂಶಯಸ್ಪದ ಪ್ರಕರಣಗಳು ಕಂಡುಬಂದರು ಅವುಗಳನ್ನು ವಶಪಡಿಸಿಕೊಂಡು ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಅವರಿಂದ ಸತ್ಯ -ಆಸತ್ಯತೆಯನ್ನು ತಿಳಿಯಬೇಕು ಎಂದು ಹೇಳಿದರು.

ಅಭ್ಯರ್ಥಿಗಳು ಅಧಿಕೃತವಾಗಿ ಘೋಷಣೆಯಾದ ನಂತರದಲ್ಲಿ ಅಧಿಕಾರಿಗಳ ಕೆಲಸ ಹೆಚ್ಚಾಗಲಿದ್ದು, ಆ ಸಮಯದಲ್ಲಿ ಬುದ್ದಿವಂತಿಕೆ ಹಾಗೂ ನಿಗಾವಹಿಸಿ ಕೆಲಸ ಮಾಡಬೇಕು ಎಂದರು.

ತರಬೇತಿಯ ಉದ್ದೇಶವೇ ಅಧಿಕಾರಿಗಳಿಗೆ ಚುನಾವಣಾ ನೀತಿ ಸಂಹಿತೆಯ ಬಗ್ಗೆ ಹಾಗೂ ಅವರ ಪಾತ್ರ ಮತ್ತು ಜವಾಬ್ದಾರಿಯನ್ನು ತಿಳಿಸುವುದಾಗಿದೆ. ಅದನ್ನು ಅರಿತು ಅಧಿಕಾರಿಗಳು ನಿಯಮಗಳನ್ನು ಪಾಲಿಸಿ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಕೆ ಎಂ ಗಾಯತ್ರಿ ಅವರು ಮಾತನಾಡಿ, ಅಧಿಕಾರಿಗಳು ಚುನಾವಣಾ ಕಾರ್ಯವನ್ನು ಯಾವುದೇ ಲೋಪವಾಗದಂತೆ ಅತ್ಯಂತ ಜಾಗರೂಕತೆಯಿಂದ ಕೆಲಸ ನಿರ್ವಹಿಸಬೇಕು. ಬೇಸಿಗೆ ಕಾಲವಾದ್ದರಿಂದ ಬಿಸಿಲು ಹೆಚ್ಚಾಗಿರುತ್ತದೆ ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು  ತಮ್ಮ ಆರೋಗ್ಯದ ಕಡೆಯು ಕಾಳಜಿವಹಿಸಬೇಕು ಎಂದರು.

ಚುನಾವಣೆಯು ಹತ್ತಿರವಾಗುತ್ತಿದ್ದು, ಜಿಲ್ಲಾ ವ್ಯಾಪ್ತಿಗೆ ಬರುವ ಎಲ್ಲಾ ಚೆಕ್ ಪೋಸ್ಟ್ ಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಿ, ಅಕ್ರಮ ವಸ್ತುಗಳು ಹಾಗೂ ಹಣ  ಸಾಗಣಿಕೆಯಾಗದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ತರಬೇತಿಯಲ್ಲಿ ವಾಣಿಜ್ಯ ಇಲಾಖೆಯ ಜಂಟಿ ಆಯುಕ್ತರಾದ ಕಂಬಣ್ಣ. ಡಿ, ಎಕ್ಸೈಸ್  ಇಲಾಖೆಯ ಉಪ ಅಧಿಕ್ಷಕರಾದ ಮೋಹನ್, ಪೊಲೀಸ್ ಇಲಾಖೆಯ ಇನ್ಸ್ಪೆಕ್ಟರ್ ಆದ ಕಾಂತರಾಜು ಸೇರಿದಂತೆ ಇನ್ನಿತರ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular