Sunday, April 20, 2025
Google search engine

Homeರಾಜ್ಯಶಿವಮೊಗ್ಗ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಲೋಕಾಯುಕ್ತ ದಾಳಿ: ಪರಿಶೀಲನೆ

ಶಿವಮೊಗ್ಗ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಲೋಕಾಯುಕ್ತ ದಾಳಿ: ಪರಿಶೀಲನೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಪಂಚಾಯತಿ ಕಚೇರಿಯಲ್ಲಿ ಅವಧಿ ಮೀರಿದ ಕಡತಗಳ ಬಗ್ಗೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಸರ್ಕಾರ ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಕಡತಗಳನ್ನು ಅನಗತ್ಯವಾಗಿ ಇಟ್ಟುಕೊಳ್ಳಲಾಗಿದೆ ಎಂದು ಲೋಕಾಯುಕ್ತಕ್ಕೆ ನೇರವಾಗಿ ದೂರು ಬಂದ ಹಿನ್ನೆಲೆಯಲ್ಲಿ ತಪಾಸಣೆ ನಡೆಸಲಾಗುತ್ತಿದೆ.

ಲೋಕಾಯುಕ್ತ ಕಚೇರಿಗೆ ಶಿವಮೊಗ್ಗ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್ ನೇತೃತ್ವದಲ್ಲಿ ಅಧಿಕಾರಿಗಳು ಆಗಮಿಸಿ ನರೇಗಾ ಸೇರಿದಂತೆ ವಿವಿಧ ಯೋಜನೆಗಳ ಕಡತಗಳನ್ನು ಪರಿಶೀಲಿಸುತ್ತಿದ್ದಾರೆ.

ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮಧ್ಯಾಹ್ನ 1 ಗಂಟೆಯಿಂದ ಕಡತಗಳ ತಪಾಸಣೆ ಆರಂಭಿಸಲಾಗಿದೆ. ವಿವಿಧ ಯೋಜನೆಗಳಿಗೆ ಸಂಬಂಧಿಸಿದ ಕಡತಗಳ ಬಗ್ಗೆ ಸಿಬ್ಬಂದಿಯಿಂದ ವಿವರಣೆ ಪಡೆಯುತ್ತಿದ್ದಾರೆ.

RELATED ARTICLES
- Advertisment -
Google search engine

Most Popular