Saturday, April 19, 2025
Google search engine

Homeಅಪರಾಧಕಾನೂನುಕೊಪ್ಪಳ ಕೃಷಿ ಇಲಾಖೆಯ ಉಪ ನಿರ್ದೇಶಕರ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಕೊಪ್ಪಳ ಕೃಷಿ ಇಲಾಖೆಯ ಉಪ ನಿರ್ದೇಶಕರ ನಿವಾಸದ ಮೇಲೆ ಲೋಕಾಯುಕ್ತ ದಾಳಿ

ಕೊಪ್ಪಳ: ಬೆಳ್ಳಂಬೆಳಗ್ಗೆ ಕೃಷಿ ಇಲಾಖೆಯ ಉಪ ನಿರ್ದೇಶರ ನಿವಾಸಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಇಂದು (ಗುರುವಾರ) ಬೆಳಿಗ್ಗೆ ಗದಗ ಲೋಕಾಯುಕ್ತ ಅಧಿಕಾರಿಗಳ ತಂಡ ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಅವರ ಕೊಪ್ಪಳ ನಗರದ ಬಿ ಟಿ ಪಾಟೀಲ್ ನಗರದಲ್ಲಿನ ಬಾಡಿಗೆ ಮನೆ ಹಾಗೂ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸುತ್ತಿದೆ.

ಸಹದೇವ ಯರಗುಪ್ಪಾ ಅವರು ಕಳೆದ ಎರಡು ವರ್ಷಗಳಿಂದ ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕರಾಗಿರುವ ಹಿನ್ನೆಲೆಯಲ್ಲಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿ ಕಡತಗಳ ಪರಿಶೀಲನೆ ನಡೆಸುತ್ತಿದೆ.

RELATED ARTICLES
- Advertisment -
Google search engine

Most Popular