Friday, April 4, 2025
Google search engine

Homeರಾಜ್ಯಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಕ್ಲೀನ್ ಚಿಟ್ : ಈ ಬಗ್ಗೆ ತನಗೆ ಮಾಹಿತಿ ಇಲ್ಲ: ಸಿಎಂ...

ಮುಡಾ ಪ್ರಕರಣದಲ್ಲಿ ಲೋಕಾಯುಕ್ತ ಕ್ಲೀನ್ ಚಿಟ್ : ಈ ಬಗ್ಗೆ ತನಗೆ ಮಾಹಿತಿ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಲೋಕಾಯುಕ್ತದವರು ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಕುಟುಂಬದವರಿಗೆ ಕ್ಲೀನ್ ಚಿಟ್ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ಸಿಎಂ ಸಿದ್ದರಾಮಯ್ಯ ಅವರು ವದಂತಿಯನ್ನು ಅಲ್ಲಗಳೆದಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವೇಳೆ, ಲೋಕಾಯುಕ್ತ ತನಿಖೆಯಲ್ಲಿ ಮುಡಾ ಪ್ರಕರಣದಲ್ಲಿ ಕ್ಲೀನ್ ಚಿಟ್ ಸುದ್ದಿ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ಎಂದು ಹೇಳಿದರು.

ದಾವೋಸ್ ಶೃಂಗಸಭೆ

ದಾವೋಸ್ ಶೃಂಗಸಭೆಯಲ್ಲಿ ಭಾಗವಹಿಸುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಸಾಲಿನ ಆಯವ್ಯಯದ ಸಿದ್ಧತೆಯಲ್ಲಿ ತೊಡಗಿಕೊಳ್ಳ ಬೇಕಾಗಿರುವುದರಿಂದ 2025 ರ ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.

ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮ

ಡಿಸಿಎಂ ಡಿ ಕೆ ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅಭಿಮಾನಿಗಳು ಅವರನ್ನು ಮುಖ್ಯಮಂತ್ರಿಗಳಾಗುವಂತೆ ಆಶಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಪಕ್ಷದ ವರಿಷ್ಠರ ತೀರ್ಮಾನವೇ ಅಂತಿಮವಾಗಿದೆ ಎಂದರು.

ಬಿಜೆಪಿಯ ಆರೋಪಗಳು ರಾಜಕೀಯ ಪ್ರೇರಿತ

ಕಾರ್ಪೊರೇಶನ್ ಹಾಗೂ ಮಂಡಳಿಗಳಿಗೆ ಅನುದಾನ ಬಿಡುಗಡೆ ಮಾಡುತ್ತಿಲ್ಲವೆಂಬ ಬಿಜೆಪಿಯರವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿ, ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಿದೆ. ಅವರ ಆರೋಪಗಳು ರಾಜಕೀಯ ಪ್ರೇರಿತವಾಗಿವೆ ಎಂದರು.

RELATED ARTICLES
- Advertisment -
Google search engine

Most Popular