Sunday, April 20, 2025
Google search engine

Homeರಾಜಕೀಯಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ಹಲವು ಜಿಲ್ಲೆಗಳ 90 ಕಡೆ ದಾಳಿ

ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್: ಹಲವು ಜಿಲ್ಲೆಗಳ 90 ಕಡೆ ದಾಳಿ

ಬೆಂಗಳೂರು: ವಿವಿಧ ಇಲಾಖೆಯಲ್ಲಿರುವ ಭ್ರಷ್ಟ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಕಾರ್ಯಾಚರಣೆ ಮುಂದುವರಿಸಿದ್ದಾರೆ.

ಇಂದು (ಸೋಮವಾರ) ಬೆಳ್ಳಂ ಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಬರೋಬ್ಬರಿ 90 ಕಡೆಗಳಲ್ಲಿ ವಿವಿಧ ಸರ್ಕಾರಿ ಅಧಿಕಾರಿಗಳ ನಿವಾಸ, ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಬೆಂಗಳೂರು, ಚಿತ್ರದುರ್ಗ, ಕಲಬುರಗಿ, ರಾಯಚೂರು, ಹಾಸನ, ಬೀದರ್, ದೇವದುರ್ಗ ಸೇರಿದಂತೆ ಹಲವು ಜಿಲ್ಲೆಗಳ ಅಧಿಕಾರಿಗಳ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಆದಾಯಕ್ಕೂ ಮೀರಿ ಅಧಿಕ ಗಳಿಕೆ, ಅಕ್ರಮ ಆಸ್ತಿ ಸಂಗ್ರಹಣೆ ಆರೋಪದಡಿ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಏಕಾಕಾಲಕ್ಕೆ ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ನಿರತರಾಗಿದ್ದಾರೆ.

ಬೆಂಗಳೂರಿನ 11 ಕಡೆ ಲೋಕಾ ದಾಳಿ: ಬೆಂಗಳೂರಿನ 11 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿದೆ. ಬಿಬಿಎಂಪಿ ಹೆಗ್ಗನಹಳ್ಳಿ ವಾರ್ಡ್ ನ ಆರ್.ಆರ್. ನಗರ ವಲಯಾಧಿಕಾರಿಗೆ ಸೇರಿದ ಕೆ.ಆರ್‌.ಪುರದಲ್ಲಿನ ಮನೆ ಸೇರಿದಂತೆ ಮೂರು ಕಡೆ ದಾಳಿ ಮಾಡಿ, ಶೋಧ ನಡೆಸುತ್ತಿದ್ದಾರೆ. ಈ ಹಿಂದೆ ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲಿ ಇವರು ಲೋಕಾಯುಕ್ತ ಟ್ರ್ಯಾಪ್​ಗೆ ಒಳಗಾಗಿದ್ದರು. ಅದರ ಮುಂದುವರಿದ ಭಾಗವಾಗಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿ ಶೋಧ ಕಾರ್ಯ ಮುಂದುವರಿಸಿದೆ. ಅಲ್ಲದೇ, ಕೈಗಾರಿಕಾ ಮತ್ತು ಸುರಕ್ಷತಾ ಇಲಾಖೆಯ ಡೆಪ್ಯೂಟಿ ಡೈರೆಕ್ಟರ್ ಮನೆ ಮೇಲೆಯೂ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಸದ್ಯ ದಾವಣಗೆರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯ ಬೆಂಗಳೂರಿನ ಉಪಕಾರ್ ಲೇಔಟ್, ಆಧ್ರಹಳ್ಳಿ ಹಾಗೂ ಚಾಮರಾಜನಗರದ ಕೊಳ್ಳೆಗಾಲದಲ್ಲಿರುವ ಮನೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲಿಸುತ್ತಿದ್ದಾರೆ.

ರಾಮನಗರದಲ್ಲಿ ಲೋಕಾಯುಕ್ತ ದಾಳಿ: ಚನ್ನಪಟ್ಟಣದಲ್ಲಿ ಲೋಕಾ‌ಯುಕ್ತ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕೆಆರ್​ಡಿಎಲ್ ಇಂಜಿನಿಯರ್ ಅವರ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ಬೆಂಗಳೂರಿನಲ್ಲಿ ಕೆಆರ್‌ ಡಿಎಲ್​ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ಅಧಿಕಾರಿಯ ಸಂಬಂಧಿಕರ ಮನೆ ಮೇಲೆ ಲೋಕಾ ದಾಳಿ ಮಾಡಲಾಗಿದ್ದು, ಚನ್ನಪಟ್ಟಣ ನಗರದ ವಿವೇಕಾನಂದ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆದಿದೆ.ಇನ್ಸ್​​​ ಪೆಕ್ಟರ್​ ಕೃಷ್ಣಯ್ಯ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸರು ದಾಳಿಯಾಗಿದ್ದು, ಬೆಳಗ್ಗೆ 8 ಗಂಟೆಯಿಂದ ಅಧಿಕಾರಿಗಳ ತಂಡ ಶೋಧ ನಡೆಸುತ್ತಿದ್ದಾರೆ. ಕೆಆರ್ ​ಡಿಎಲ್ ಇಂಜಿನಿಯರ್ ಮನೆಯಲ್ಲಿ‌ ಲೆಕ್ಕಪತ್ರ, ದಾಖಲೆ ಪರಿಶೀಲನೆ‌ ನಡೆಸುತ್ತಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಅಧಿಕಾರಿ ವಾಸವಾಗಿದ್ದಾರೆ. ಈ ಅಧಿಕಾರಿ ಮೂಲತಃ ಮದ್ದೂರು ತಾಲೂಕಿನ‌ ಬೆಳ್ಳೂರು ಗ್ರಾಮದ ನಿವಾಸಿಯಾಗಿದ್ದಾರೆ.

ಕೊಳ್ಳೇಗಾಲದಲ್ಲೂ ಲೋಕಾಯುಕ್ತ ದಾಳಿ: ಬೆಂಗಳೂರಿನ ಕಾರ್ಮಿಕ ಇಲಾಖೆ ಉಪನಿರ್ದೇಶಕರಿಗೆ ಸೇರಿದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಫಾರಂ ಹೌಸ್, ಅಧಿಕಾರಿ ಸಂಬಂಧಿಕರ ಮನೆ ಸೇರಿದಂತೆ 9 ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಕೊಳ್ಳೇಗಾಲದ ಉಪ್ಪಾರ ಮೋಳೆಯಲ್ಲಿರುವ ಫಾರಂ ಹೌಸ್, ಕೊಳ್ಳೇಗಾಲದ ಮನೆ ಹಾಗೂ ಸಂಬಂಧಿಕರ ಮನೆಯಲ್ಲಿರುವ ಕಡತಗಳು, ಆಸ್ತಿಪತ್ರಗಳನ್ನು ಹುಡುಕಾಡುತ್ತಿದ್ದು, ಎರಡು ಕಾರಿನಲ್ಲಿ ಲೋಕಾಯುಕ್ತ ಸಿಬ್ಬಂದಿ ಬಂದಿದ್ದು, ಆರಕ್ಕೂ ಹೆಚ್ಚು ಸಿಬ್ಬಂದಿಯಿಂದ ದಾಖಲೆಗಳ‌ ಪರಿಶೀಲನೆ ನಡೆದಿದೆ.

RELATED ARTICLES
- Advertisment -
Google search engine

Most Popular