ಮಂಡ್ಯ: ಜಿಲ್ಲಾಡಳಿತದಿಮದ ಆಚರಿಸಲಾಗುವ ಮಹಾನ್ ವ್ಯಕ್ತಿಗಳ ಜಯಂತಿ ಒಂದು ಜನಾಂಗ, ಜಾತಿ ಅಥವಾ ಧರ್ಮಕ್ಕೆ ಸೀಮಿತವಗಿರುವುದಿಲ್ಲ. ಜಿಲ್ಲೆಯ ಎಲ್ಲಾ ಸಂಘ, ಸಂಸ್ಥೆ, ಸಂಘಟನೆಗಳು ಪಾಲ್ಗೊಂಡು ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ: ಹೆಚ್ ಎಲ್ ನಾಗರಾಜು ಅವರು ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ಜಯಂತಿಗಳ ಆಚರಣೆಯ ಬಗ್ಗೆ ಪೂರ್ವಭಾವಿ ಸಿದ್ಧತಾ ಸಭೆ ನಡೆಸಿ ಮಾತನಾಡಿದರು.
ಈಗಾಗಲೇ ೩೨ ಸಂಘ ಸಂಸ್ಥೆಗಳ ಹೆಸರನ್ನು ಗುರುತಿಸಿ ಇನ್ನೂ ಮುಂದೆ ಜಿಲ್ಲಾಡಳಿತದ ವತಿಯಿಂದ ನಡೆಯಲಾಗುವ ಜಯಂತಿಗಳು ಹಾಗೂ ಅದರ ಪೂರ್ವಭಾವಿ ಸಿದ್ಧತಾ ಸಭೆಗಳಿಗೆ ಆಹ್ವಾನ ನೀಡಲಾಗುತ್ತಿದೆ. ಎಲ್ಲಾ ಸಂಘಟನೆಗಳು ಒಟ್ಟಿಗೆ ಸೇರಿ ಅರ್ಥಪೂರ್ಣವಾಗಿ ಜಯಂತಿಗಳನ್ನು ಆಚರಿಸಿ, ಮಹಾನ್ ವ್ಯಕ್ತಿಗಳು ನೀಡಿದ ಸಂದೇಶವನ್ನು ಎಲ್ಲರಿಗೂ ನೀಡೋಣ ಎಂದರು.
ಕಲಾಮಂದಿರದಲ್ಲಿ ದುರಸ್ತಿ ಕೆಲಸಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಜನವರಿ ೧೯ರಂದು ಮಹಾಯೋಗಿ ವೇಮನ ಜಯಂತಿ, ಜನವರಿ ೨೩ ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ, ಹಾಗೂ ಫೆಬ್ರವರಿ ೨೯ ರಂದು ಸಿದ್ದರಾಮೇಶ್ವರ ಜಯಂತಿಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಚರಣೆ ಮಾಡುವುದಕ್ಕೆ ಸಭೆಯಲ್ಲಿ ತೀರ್ಮಾನಿಸಲಾಯಿತು ಇದೇ ಸಂದರ್ಭದಲ್ಲಿ ಸಭೆಯಲ್ಲಿ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಉದಯ್, ಸೇರಿದಂತೆ ವಿವಿಧ ಸಂಘಟನೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು .