Tuesday, April 22, 2025
Google search engine

Homeರಾಜ್ಯಚುನಾವಣೆಯಲ್ಲಿ ಸೋಲು ಗೆಲುವು ಸಹಜ: ಸೋಲಿನ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪ್ರತಿಕ್ರಿಯೆ

ಚುನಾವಣೆಯಲ್ಲಿ ಸೋಲು ಗೆಲುವು ಸಹಜ: ಸೋಲಿನ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪ್ರತಿಕ್ರಿಯೆ

ಮಂಗಳೂರು: ಚುನಾವಣೆಯಲ್ಲಿ ಸೋಲು ಗೆಲುವು ಸಹಜ. ಚುನಾವಣೆಯಲ್ಲಿ ಗೆದ್ದ ಬ್ರಿಜೇಶ್ ಚೌಟರಿಗೆ ಅಭಿನಂದನೆಗಳು. ಸ್ಪರ್ಧೆಗೆ ಅವಕಾಶ ಮಾಡಿಕೊಟ್ಟ ಕಾಂಗ್ರೆಸ್ ನಾಯಕರಿಗೆ ಧನ್ಯವಾದಗಳು ಎಂದು ದಕ್ಷಿಣ ಕನ್ನಡ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹೇಳಿದ್ದಾರೆ.

ಮಂಗಳೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಅತೀ ಹೆಚ್ಚು ಮತ ಪಡೆದ ದ.ಕ ಲೋಕಸಭಾ ಕ್ಷೆತ್ರದ ಕಾಂಗ್ರೆಸ್ ಅಭ್ಯರ್ಥಿ, ಕಳೆದ ಬಾರಿಗಿಂತ ಒಂದು ಲಕ್ಷಕ್ಕೂ ಅಧಿಕ ಮತಗಳು ಬಂದಿದೆ. ಇದು ಅಂತ್ಯವಲ್ಲ, ಆರಂಭ. ಮುಂಬರುವ ವರ್ಷಗಳಲ್ಲಿ ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷವನ್ನು ಸದೃಢವಾಗಿ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆಗಳನ್ನು ಉಳಿಸಿಕೊಳ್ಳುತ್ತೇನೆ. ಪಕ್ಷ ಸಂಘಟನೆಯಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಕೊರತೆ ಇದೆ, ಅದನ್ನು ಸರಿಪಡಿಸುವ ಕೆಲಸ ಮಾಡುತ್ತೇನೆ. ಗ್ಯಾರಂಟಿ ಯೋಜನೆಗಳನ್ನು ಕೊಟ್ಟ ಮೇಲೂ ಕಾಂಗ್ರೆಸ್ಗೆ ಹಿನ್ನಡೆಯಾಗಿದೆ, ಹೀಗಾಗಿ ರಾಜ್ಯದ ಜನರ ಮನಸ್ಸಿನಲ್ಲಿ ಏನಿದೆ ಅನ್ನೋದನ್ನು ತಿಳಿದುಕೊಳ್ಳಬೇಕು. ಅಯೋಧ್ಯೆಯ ಜನರು ಬಿಜೆಪಿಯನ್ನು ಸೋಲಿಸಿದ್ದಾರೆ, ಮಂಗಳೂರು ಜನರು ಅಯೋಧ್ಯೆ ಅಂತ ಹೇಳುತ್ತಿದ್ದಾರೆ. ಜಿಲ್ಲೆಯ ಅಭಿವೃದ್ಧಿಯ ಕೆಲಸಗಳಲ್ಲಿ ನೂತನ ಸಂಸದರಿಗೆ ನಮ್ಮಸಹಕಾರ ಇದೆ.ಜಿಲ್ಲೆಯಲ್ಲಿ ಸಾಮರಸ್ಯ ನರಳಿ ತರಲು ನೂತನ ಸಂಸದರು ಕಾರ್ಯ ನಿರ್ವಹಿಸಬೇಕು. ಚುನಾವಣೆಯಲ್ಲಿ ಸಹಕಾರ ಕೊಟ್ಟವರನ್ನು ನಾನು ಜೀವನದಲ್ಲೇ ಮರೆಯುವುದಿಲ್ಲ. ಇಂಡಿಯಾ ಮೈತ್ರಿಕೂಟ ಉತ್ತಮ ಸಾಧನೆ ಮಾಡಿದೆ, ದೇಶದಲ್ಲಿ ಬದಲಾವಣೆಯ ಗಾಳಿ ಬೀಸಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

RELATED ARTICLES
- Advertisment -
Google search engine

Most Popular