Friday, April 11, 2025
Google search engine

Homeಅಪರಾಧಸ್ಲೀಪರ್ ಕೋಚ್ ಬಸ್ ​​ನಲ್ಲೇ ವಿಷ ಸೇವಿಸಿದ ಪ್ರೇಮಿಗಳು: ಯುವತಿ ಸಾವು, ಯುವಕ ಪಾರು

ಸ್ಲೀಪರ್ ಕೋಚ್ ಬಸ್ ​​ನಲ್ಲೇ ವಿಷ ಸೇವಿಸಿದ ಪ್ರೇಮಿಗಳು: ಯುವತಿ ಸಾವು, ಯುವಕ ಪಾರು

ಹಾವೇರಿ: ಸ್ಲೀಪರ್ ಕೋಚ್ ಬಸ್​ನಲ್ಲಿ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆಗೆ ಯತ್ನಿಸಿದ್ದು, ಯುವತಿ ಸಾವನ್ನಪ್ಪಿದ್ದು, ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಹೇಮಾ ರಾಮಕೃಷ್ಣಪ್ಪ (20) ಮೃತ ಯುವತಿ.

ಬಾಗಲಕೋಟೆ ಮೂಲದ ಅಖಿಲ್​​ ಮತ್ತು ಅಂತಿಮ ವರ್ಷದ ಬಿಕಾಂ ಓದುತ್ತಿದ್ದ ಬೆಂಗಳೂರು ಮೂಲದ ಹೇಮಾ ರಾಮಕೃಷ್ಣಪ್ಪ ಪರಸ್ಪರ ಪ್ರೀತಿಸುತ್ತಿದ್ದು, ಬಾಳುವುದಾದರೆ ಇಬ್ಬರೂ ಜೊತೆಗೆ ಬಾಳುವ ನಿರ್ಣಯ ಮಾಡಿಕೊಂಡು ಮದುವೆಯಾಗಲು ನಿರ್ಧರಿಸಿದ್ದಾರೆ. ಆದರೆ ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ. ಇದರಿಂದ ನೊಂದ ಅಖಿಲ್ ಮತ್ತು ಹೇಮಾ ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ.

ತಮ್ಮ ಪ್ರೇಮ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ನೊಂದ ಪ್ರೇಮಿಗಳು ಸ್ಲೀಪರ್ ಕೋಚ್ ಬಸ್ ಹತ್ತಿದ್ದಾರೆ. ನಂತರ ವಿಷ ಸೇವಿಸಿಕೊಂಡ ಅಖಿಲ್ ಮತ್ತು ಹೇಮಾ ನಿದ್ರಿಸಿದ್ದಾರೆ. ಊಟಕ್ಕೆಂದು ಮಾರ್ಗಮಧ್ಯೆ ಹೋಟೆಲ್​ ಬಳಿ ಬಸ್ ನಿಲ್ಲಿಸಿದ್ದಾಗ ವಿಷದ ವಾಸನೆ ಬರುವುದನ್ನು ಗಮನಿಸಿದ ಪ್ರಯಾಣಿಕರು ಪರಿಶೀಲನೆ ನಡೆಸಿದಾಗ ಆತ್ಮಹತ್ಯೆಗೆ ಯತ್ನಿಸಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಎಚ್ಚೆತ್ತ ಪ್ರಯಾಣಿಕರು ಸ್ಥಳೀಯರ ಸಹಾಯದಿಂದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿದ್ದರೂ ದುರಾದೃಷ್ಟವಶಾತ್ ಹೇಮಾ ಕೊನೆಯುಸಿರೆಳೆದಿದ್ದಾಳೆ. ಪ್ರಜ್ಞೆ ಕಳೆದುಕೊಂಡಿದ್ದ ಅಖಿಲ್​ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಪಟ್ಟಣದ ಚಳಗೇರಿ ಟೋಲ್ 5 ದಿನಗಳ ಹಿಂದೆ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ರಾಣೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಸಹಾಯವಾಣಿ

ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – 9152987821

RELATED ARTICLES
- Advertisment -
Google search engine

Most Popular