ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಇಂದು ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಹವಾಮಾನ ಇಲಾಖೆಯು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾ ಡಿ.೨೮ರ ಇಂದು ರಾಜ್ಯದ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಅಂತ ತಿಳಿಸಿದೆ. ಇನ್ನೂ ಡಿ.೨೯ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕ್ಷೀಣಿಸಲಿದೆ. ನಿನ್ನೆ ಬೆಂಗಳೂರು, ಮಂಡ್ಯ, ದಾವಣಗೆರೆ, ರಾಮನಗರ, ತುಮಕೂರು, ಹಾಸನ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಿದೆ.
ಕರಾವಳಿ, ಮಲೆನಾಡು ಹಾಗೂ ಹಳೇ ಮೈಸೂರು ಭಾಗದ ಜಿಲ್ಲೆಗಳಲ್ಲಿ ಇಂದು ಸಹ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.