Tuesday, April 8, 2025
Google search engine

HomeUncategorizedರಾಷ್ಟ್ರೀಯಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳ

ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳ

ನವದೆಹಲಿ: ಅಡುಗೆ ಅನಿಲ ದರವನ್ನು ಸಿಲಿಂಡರ್‌ಗೆ 50 ರೂ. ಹೆಚ್ಚಿಸಲಾಗಿದೆ ಎಂದು ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಸೋಮವಾರ ತಿಳಿಸಿದ್ದಾರೆ.

‘ಪ್ರತಿ ಸಿಲಿಂಡರ್‌ಗೆ 50 ರೂ. ಹೆಚ್ಚಳವು ಉಜ್ವಲ ಫಲಾನುಭವಿಗಳು ಮತ್ತು ಉಜ್ವಲೇತರ ಫಲಾನುಭವಿಗಳಿಗೆ ಅನ್ವಯಿಸುತ್ತದೆ. ಇದನ್ನು ಪ್ರತಿ 15 ದಿನಗಳಿಗೊಮ್ಮೆ ಅಥವಾ ಒಂದು ತಿಂಗಳಿಗೊಮ್ಮೆ ಪರಿಶೀಲಿಸಲಾಗುತ್ತದೆʼ ಎಂದು ಮಾಹಿತಿ ನೀಡಿದ್ದಾರೆ.

ಅನಿಲ ಕಂಪನಿಗಳು ಸಿಲಿಂಡರ್‌ ಬೆಲೆ ಹೆಚ್ಚಿಸುವುದಾಗಿ ತಿಳಿಸಿವೆ, ಹೀಗಾಗಿ ಪ್ರತಿ ಎಲ್‌ಪಿಜಿ ಸಿಲಿಂಡರ್‌ ಬೆಲೆ 50 ರೂ. ಹೆಚ್ಚಳವಾಗಲಿದೆ.

ಉಜ್ವಲ (ಪಿಎಂಯುವೈ) ಮತ್ತು ಉಜ್ವಲೇತರ ಗ್ರಾಹಕರಿಗೂ ಬೆಲೆ ಏರಿಕೆ ಅನ್ವಯವಾಗಲಿದೆ. ಆದ್ದರಿಂದ ಇನ್ಮುಂದೆ ಉಜ್ವಲ ಯೋಜನೆಯ 503 ರೂ. ಪಾವತಿಸುತ್ತಿದ್ದ 14.2 ಕೆಜಿ ಸಿಲಿಂಡರ್‌ಗೆ 553 ರೂ. ಹಾಗೂ ಇತರೇ ಗ್ರಾಹಕರು 803 ರೂ. ಪಾವತಿಸುತ್ತಿದ್ದ 14.2 ಕೆಜಿ ಸಿಲಿಂಡರ್‌ಗೆ 853 ರೂ. ಪಾವತಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವರು ವಿವರಿಸಿದ್ದಾರೆ.

RELATED ARTICLES
- Advertisment -
Google search engine

Most Popular