Tuesday, March 17, 2026
Google search engine

Homeರಾಜ್ಯಎಲ್‌ಪಿಜಿ ಇಕೆವೈಸಿ ಎಲ್ಲರಿಗೂ ಕಡ್ಡಾಯವಲ್ಲ : ಉಜ್ವಲ ಯೋಜನೆಗೆ ಮಾತ್ರ ಕಡ್ಡಾಯ

ಎಲ್‌ಪಿಜಿ ಇಕೆವೈಸಿ ಎಲ್ಲರಿಗೂ ಕಡ್ಡಾಯವಲ್ಲ : ಉಜ್ವಲ ಯೋಜನೆಗೆ ಮಾತ್ರ ಕಡ್ಡಾಯ

ನವದೆಹಲಿ : ಎಲ್​ಪಿಜಿ ಗ್ರಾಹಕರು ಇಕೆವೈಸಿ ಮಾಡುವುದು ಕಡ್ಡಾಯ ಎನ್ನುವಂತಹ ಸುದ್ದಿ ಎರಡು ದಿನಗಳಿಂದ ಕೇಳಿಬರುತ್ತಿದೆ. ಇದೇ ವೇಳೆ, ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವಿಚಾರದ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದು, ಆಧಾರ್ ಬಯೋಮೆಟ್ರಿಕ್ ದೃಢೀಕರಣ ಅಥವಾ ಇಕೆವೈಸಿಯು ಎಲ್ಲಾ ಎಲ್​ಪಿಜಿ ಗ್ರಾಹಕರಿಗೂ ಕಡ್ಡಾಯವೇನಲ್ಲ. ಇಕೆವೈಸಿ ಮಾಡಿಸಿಲ್ಲದ ಎಲ್​ಪಿಜಿ ಗ್ರಾಹಕರು ಮಾತ್ರ ಈ ಗ್ಯಾಸ್ ಪಡೆಯಲು ಇಕೆವೈಸಿ ಮಾಡುವುದು ಕಡ್ಡಾಯ ಎಂದು ಸಚಿವಾಲಯವು ಹೇಳಿದೆ.

ಎಲ್​ಪಿಜಿ ಗ್ರಾಹಕರು ಆಧಾರ್ ದೃಢೀಕರಣ ಮಾಡುವ ವಿಚಾರದಲ್ಲಿ ಹೊಸದೇನೂ ನಿರ್ದೇಶನ ಹೊರಡಿಸಲಾಗಿಲ್ಲ. ಬಯೋಮೆಟ್ರಿಕ್ ಆಧಾರ್ ದೃಢೀಕರಣ ಪೂರ್ಣಗೊಳಿಸುವಂತೆ ಎಲ್​ಪಿಜಿ ಗ್ರಾಹಕರನ್ನು ಪ್ರೋತ್ಸಾಹಿಸುವ ಕ್ರಮ ಜಾರಿಯಲ್ಲಿದೆ.

  • ಎಲ್​ಪಿಜಿ ಗ್ರಾಹಕರು ಇದೂವರೆಗೆ ಇಕೆವೈಸಿ ಮಾಡಿಸಿಲ್ಲದೇ ಇದ್ದರೆ ಅವರು ಈಗ ಮಾಡಿಸುವುದು ಕಡ್ಡಾಯ.
  • ಪಿಎಂ ಉಜ್ವಲ್ ಯೋಜನೆಯ ಫಲಾನುಭವಿಗಳು ಪ್ರತೀ ಹಣಕಾಸು ವರ್ಷಕ್ಕೆ ಒಮ್ಮೆ ಇಕೆವೈಸಿ ಅಪ್​ಡೇಟ್ ಮಾಡಬೇಕು. ಅದೂ 7 ಸಿಲಿಂಡರ್ ಪೂರೈಕೆಗೆ ಸಬ್ಸಿಡಿ ಪಡೆದು, 8 ಮತ್ತು 9ನೇ ಸಿಲಿಂಡರ್ ಪಡೆಯುವಾಗ ಇಕೆವೈಸಿ ಅಪ್​ಡೇಟ್ ಮಾಡಬೇಕು.
  • ಪಿಎಂ ಉಜ್ವಲ್ ಯೋಜನೆಗೆ ಒಳಪಡದ ಇತರ ಎಲ್​ಪಿಜಿ ಗ್ರಾಹಕರು ಒಮ್ಮೆ ಇಕೆವೈಸಿ ಮಾಡಿಸಿದ್ದರೆ ಸಾಕು, ಮತ್ತೆ ಅಪ್​ಡೇಟ್ ಮಾಡುವ ಅಗತ್ಯ ಇಲ್ಲ.
  • ಮನೆಯಲ್ಲೇ ಕುಳಿತು, ಉಚಿತವಾಗಿ ಇಕೆವೈಸಿಯನ್ನು ಮಾಡಬಹುದು.

ಎಲ್​ಪಿಜಿ ಗ್ರಾಹಕರು ಇಕೆವೈಸಿ ಅಪ್​ಡೇಟ್ ಮಾಡುವುದು ಹೇಗೆ?

ಎಲ್​ಪಿಜಿ ಗ್ರಾಹಕರು ತಮ್ಮ ವಿತರಕರ ಕಚೇರಿಗೆ ಹೋಗಿ ಅಲ್ಲಿ ಬಯೋಮೆಟ್ರಿಕ್ ಆಧಾರ್ ಅಥೆಂಟಿಕೇಶನ್ ಕೊಡಬಹುದು. ಇದು ಒಂದು ವಿಧಾನ.

ಮತ್ತೊಂದು ವಿಧಾನ ಆನ್​ಲೈನ್​ನದ್ದು. ಆಧಾರ್ ಫೇಸ್​ಆರ್​ಡಿ ಆ್ಯಪ್ ಅನ್ನು ಡೌನ್​ಲೋಡ್ ಮಾಡಬೇಕು. ನಿಮ್ಮ ಗ್ಯಾಸ್​ನ ಕಂಪನಿಯ ಆ್ಯಪ್ ಅನ್ನೂ ಡೌನ್​ಲೋಡ್ ಮಾಡಬೇಕು. ಉದಾಹರಣೆಗೆ, ಇಂಡೇನ್ ಗ್ರಾಹಕರು ಐಒಸಿಎಲ್​ನ ಆ್ಯಪ್ ಡೌನ್​ಲೋಡ್ ಮಾಡಬೇಕು. ಹಾಗೆಯೇ, ಬಿಪಿಸಿಲ್ ಅಥವಾ ಎಚ್​ಪಿಸಿಎಲ್ ಬಳಕೆದಾರರು ಆಯಾ ಕಂಪನಿಗಳ ಆ್ಯಪ್​ಗಳನ್ನು ಬಳಸಿ ಬಯೋಮೆಟ್ರಿಕ್ ಆಧಾರ್ ಅಥೆಂಟಿಕೇಶನ್ ಮಾಡಿಸಬಹುದು.

RELATED ARTICLES
- Advertisment -
Google search engine

Most Popular