Thursday, April 10, 2025
Google search engine

Homeರಾಜಕೀಯಮತದಾರರಿಗೆ ಆಮಿಷ: ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್​​ಗೆ ಅರ್ಜಿ

ಮತದಾರರಿಗೆ ಆಮಿಷ: ಸಿಎಂ ಸಿದ್ದರಾಮಯ್ಯ ಶಾಸಕ ಸ್ಥಾನ ಅಸಿಂಧು ಕೋರಿ ಹೈಕೋರ್ಟ್​​ಗೆ ಅರ್ಜಿ

ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವಲ್ಲಿ ನೆರವಾಗಿದ್ದ ಐದು ಗ್ಯಾರಂಟಿ ಯೋಜನೆಗಳು. ಇದರ ಕಾರ್ಡ್ ಸಿದ್ಧಪಡಿಸಿ ಚುನಾವಣಾ ಪೂರ್ವದಲ್ಲಿ ಮತದಾರರಿಗೆ ಹಂಚಲಾಗಿತ್ತು. ಇದೀಗ ಈ ವಿಚಾರ ಹೈಕೋರ್ಟ್ ಮೆಟ್ಟಿಲೇರಿದ್ದು, ಸಿಎಂ ಸಿದ್ದರಾಮಯ್ಯ ಅವರ ಶಾಸಕ ಸ್ಥಾನ ಅಸಿಂಧುಗೊಳಿಸುವಂತೆ ಕೋರಲಾಗಿದೆ.

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ವೇಳೆ ಗ್ಯಾರಂಟಿ ಕಾರ್ಡ್​ಗಳನ್ನು ವಿತರಿಸುವ ಮೂಲಕ ಮತದಾರರಿಗೆ ಆಮಿಷವೊಡ್ಡಿರುವ ಆರೋಪದ ಮೇಲೆ ಸಿಎಂ ಸಿದ‍್ಧರಾಮಯ್ಯ ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ವ್ಯಕ್ತಿಯೊಬ್ಬರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್​ ಮೊರೆ ಹೋಗಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗುವಲ್ಲಿ ಐದು ಗ್ಯಾರಂಟಿ ಯೋಜನೆಗಳು ನೆರವಾಗಿದ್ದವು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಈ ಐದು ಯೋಜನೆಗಳು ಜಾರಿ ಮಾಡುತ್ತೇವೆ ಎಂದು ಮತದಾರರನ್ನು ತಮ್ಮತ್ತ ಸೆಳೆಯಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಸಹಿ ಹಾಕಿರುವ ಗ್ಯಾರಂಟಿ ಕಾರ್ಡ್​ಗಳನ್ನು​ ಚುನಾವಣಾ ಪೂರ್ವದಲ್ಲಿ ರಾಜ್ಯಾದ್ಯಂತ ಹಂಚಲಾಗಿತ್ತು.

ಪ್ರಜಾಪ್ರತಿನಿಧಿ ಕಾಯ್ದೆ ಸೆಕ್ಷನೆ 123 (1) ಪ್ರಕಾರ ಆಮಿಷ ಒಡ್ಡುವಂತಿಲ್ಲ. ಆದರೆ ಕಾಂಗ್ರೆಸ್ ಪಕ್ಷವು ಮತದಾರರಿಗೆ ಗ್ಯಾರಂಟಿ‌ ಕಾರ್ಡ್ ವಿತರಿಸಿ ಆಮಿಷ ಒಡ್ಡಿದೆ. ಹೀಗಾಗಿ ಸಿದ್ದರಾಮಯ್ಯ ಅವರ ಶಾಸಕ ಸ್ಥಾನದ ಆಯ್ಕೆ ಅಸಿಂಧುಗೊಳಿಸುವಂತೆ ಕೋರಿ ಕೆ.ಎಂ.ಶಂಕರ ಎಂಬುವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ಅದರಂತೆ ಕಚೇರಿ ಆಕ್ಷೇಪಣೆಗಳನ್ನು ಸರಿಪಡಿಸುವಂತೆ ಹೈಕೋರ್ಟ್ ಸೂಚನೆ ನೀಡಿ ವಿಚಾರಣೆಯನ್ನು ಜುಲೈ 28ಕ್ಕೆ ಮುಂದೂಡಿದೆ.

RELATED ARTICLES
- Advertisment -
Google search engine

Most Popular