ವರದಿ: ಬೆಕ್ಕರೆ ಸತೀಶ್ ಆರಾಧ್ಯ
ಪಿರಿಯಾಪಟ್ಟಣ: ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ
ಕರ್ತವ್ಯ ನಿರ್ವಹಿಸುತ್ತಿರುವ ಎಂ.ಎಸ್ ರಮೇಶ್ ಅವರಿಗೆ 2024ನೆ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕ ಲಭಿಸಿದೆ.
ಪಿರಿಯಾಪಟ್ಟಣ ತಾಲೂಕಿನ ಮಂಚದೇವನಹಳ್ಳಿ ಗ್ರಾಮದ ಸ್ವಾಮಿಗೌಡ ಕಾಳಮ್ಮ ರವರ ಪುತ್ರರಾದ ಎಂ.ಎಸ್ ರಮೇಶ್ ಅವರು 2007 ರಲ್ಲಿ ಆರಕ್ಷಕ ಇಲಾಖೆಯಲ್ಲಿ ಕಾನ್ಸ್ಟೇಬಲ್ ಆಗಿ ವೃತ್ತಿ ಆರಂಭಿಸಿ 2014ರಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಪದೋನ್ನತಿ ಹೊಂದಿದ್ದು ಬೆಂಗಳೂರಿನ ಹಲವು ಕಾನೂನು ಸುವ್ಯವಸ್ಥೆ ಮತ್ತು ಸಂಚಾರಿ ಠಾಣೆ ಸೇರಿದಂತೆ ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು ಪ್ರಸ್ತುತ ಬೆಂಗಳೂರಿನ ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ, ಸೇವಾ ಅವಧಿಯಲ್ಲಿ ಇವರ ಪ್ರಾಮಾಣಿಕ ಹಾಗೂ ದಕ್ಷ ಕಾರ್ಯದಿಂದ ಹಲವು ಪ್ರಕರಣಗಳನ್ನು ಭೇದಿಸಿದ ಹಿನ್ನೆಲೆ ಮುಖ್ಯಮಂತ್ರಿಗಳ ಚಿನ್ನದ ಪದಕ ಲಭಿಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪದಕ ಸ್ವೀಕರಿಸಿದ್ದಾರೆ.
ಎಂ.ಎಸ್ ರಮೇಶ್ ಅವರ ಸಾಧನೆಗೆ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ಸೇರಿದಂತೆ ಕೋರಮಂಗಲ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕುಟುಂಬದವರು ಹಿತೈಷಿಗಳು ಸ್ನೇಹಿತರು ಹಾಗೂ ಮಂಚದೇವನಹಳ್ಳಿ ಗ್ರಾಮಸ್ಥರು ಶುಭ ಕೋರಿದ್ದಾರೆ.