ರಾಮನಗರ: ರಾಜ್ಯ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಫೆ.೧೬ ರಂದು ನಡೆಯುವ ಉಪ ಚುನಾವಣೆಯ ಮತದಾನ ಶಾಂತಿ, ಮುಕ್ತ, ನ್ಯಾಯಯುತ ಮತ್ತು ನಿಷ್ಪಕ್ಷಪಾತವಾಗಿ ನಡೆಸಲು ಅನುಕೂಲವಾಗುವಂತೆ ಫೆ. ೧೪ರ ಸಂಜೆ ೫ ಗಂಟೆಯಿಂದ ಫೆ. ೧೬ರ ಮಧ್ಯರಾತ್ರಿ ೧೨ ಗಂಟೆಯವರೆಗೆ ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರೀತಿಯ ಮದ್ಯದ ಸನ್ನದುಗಳನ್ನು ಮುಚ್ಚಲು, ಮದ್ಯ ಮಾರಾಟ ಹಾಗೂ ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್ ಅವರು ಆದೇಶ ಹೊರಡಿಸಿದ್ದಾರೆ.