ಮದ್ದೂರು: ಮದ್ದೂರಿನಲ್ಲಿ ಗುರುವಾರ ಪ್ರಚೋದನಾಕಾರಿ ಭಾಷಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಎಫ್‌ಐಆರ್ ದಾಖಲಿಸಿದ್ದಾರೆ. ಮದ್ದೂರು ಠಾಣೆ ಪಿಎಸ್ಐ ಮಂಜುನಾಥ್ ಅವರು ಸ್ವಯಂಪ್ರೇರಿತ ಎಫ್‌ಐಆರ್ ದಾಖಲಿಸಿದ್ದಾರೆ. ಠಾಣೆ ಪಿಎಸ್ಐ ಮಂಜುನಾಥ್ ದೂರಿನನ್ವಯ ಭಾರತೀಯ ನ್ಯಾಯ ಸಂಹಿತೆಯ ಕಲಂ ಬಿಎನ್ಎಸ್ 196 (1)(a), 299, 353(2) ಯತ್ನಾಳ್ ವಿರುದ್ಧ ಪ್ರಕರಣ ದಾಖಲಾಗಿದೆ.