Friday, April 4, 2025
Google search engine

Homeಕ್ರೀಡೆಮದ್ದೂರು: ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಪುರಸಭಾ ಅಧ್ಯಕ್ಷೆ ಕೋಕಿಲ ಅರುಣ್ ಕುಮಾರ್ ಚಾಲನೆ

ಮದ್ದೂರು: ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟಕ್ಕೆ ಪುರಸಭಾ ಅಧ್ಯಕ್ಷೆ ಕೋಕಿಲ ಅರುಣ್ ಕುಮಾರ್ ಚಾಲನೆ

ಮದ್ದೂರು: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಚಂದುಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಂಯುಕ್ತ ಆಶಯದಲ್ಲಿ ಆಯೋಜಿಸಲಾಗಿದ್ದು, ಕ್ರೀಡಾಕೂಟಕ್ಕೆ ಮದ್ದೂರು ಪುರಸಭಾ ಅಧ್ಯಕ್ಷೆ ಕೋಕಿಲ ಅರುಣ್ ಕುಮಾರ್ ಚಾಲನೆ ನೀಡಿ ಮಾತನಾಡಿದರು.

ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಗೆದ್ದವರಿಗೆ ಒಂದು ಅವಕಾಶವಾದರೆ ಸೋತವರಿಗೆ ನೂರಾರು ಅವಕಾಶಗಳಿರುತ್ತವೆ. ಅದರ ಅನುಭವವನ್ನು ಪಡೆದು ಮತ್ತೆ ಗೆಲ್ಲುವ ವಿಶ್ವಾಸ ಮೂಡಿಸಿಕೊಳ್ಳುವ ಮೂಲಕ ಪ್ರತಿಯೊಬ್ಬ ಕ್ರೀಡಾಪಟುವು ಸದೃಢರಾಗಬೇಕು ಎಂದರು.

ಈ ವೇಳೆ ಕದಲೂರು ಉದಯ ಚಾರಿ ಟ್ರಬಲ್ ಟ್ರಸ್ಟ್ ನಿರ್ದೇಶಕ ರವಿಕುಮಾರ್ ಕ್ರೀಡಾಪಟುಗಳನ್ನು ಉತ್ತೇಜಿಸಿ ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ವಿವೇಕಾನಂದ ಭಾಗವಹಿಸಿ ಸ್ವತಃ ಗುಂಡು ಎಸೆಯುವ ಮೂಲಕ ಕ್ರೀಡಾಪಟುಗಳಿಗೆ ಪ್ರೇರೇಪಿಸಿ ಶುಭ ಕೋರಿದರು.

ಈ ವೇಳೆ ಚಂದುಪುರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಹನುಮಂತು, ಗೀತಾ, ಉಪನ್ಯಾಸಕರಾದ ಅಂಕಪ್ಪ, ಸೇರಿದಂತೆ ಇತರರು ಹಾಜರಿದ್ದರು.

RELATED ARTICLES
- Advertisment -
Google search engine

Most Popular