ಮದ್ದೂರು: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಪುರಸಭಾ ಪೌರಕಾರ್ಮಿಕರ ದಿನಾಚರಣೆ ಹಿನ್ನೆಲೆ ಪೌರ ಕಾರ್ಮಿಕರಿಗೆ ಹಾಗೂ ಇಲಾಖೆ ಸಿಬ್ಬಂದಿಗಳಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮಕ್ಕೆ ಪುರಸಭಾ ಅಧ್ಯಕ್ಷರಾದ ಕೋಕಿಲ ಅರುಣ್ ಸ್ವತಃ ಗುಂಡು ಎಸೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಈ ವೇಳೆ ಉಪಾಧ್ಯಕ್ಷ ಟಿ. ಆರ್ ಪ್ರಸನ್ನ ಕುಮಾರ್, ಸದಸ್ಯರಾದ ಬಸವರಾಜು, ಸಿದ್ದರಾಜು, ಮಹೇಶ್, ಪುರಸಭಾ ಮುಖ್ಯ ಅಧಿಕಾರಿ ಮೀನಾಕ್ಷಿ, ಆರ್ ಓ ಪುಟ್ಟಸ್ವಾಮಿ ಸೇರಿದಂತೆ ಪೌರಕಾರ್ಮಿಕರು ಹಾಜರಿದ್ದರು.