ಮದ್ದೂರು: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಪ್ರಾಥಮಿಕ ಶಾಲಾ ಹಾಗೂ ಪ್ರೌಢಶಾಲಾ ಶಿಕ್ಷಕರ ಕ್ರೀಡಾಕೂಟವನ್ನು ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಕೆಆರ್ ಮಹೇಶ್ ಗುಂಡು ಎಸೆಯುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
ಪ್ರತಿದಿನ ಶಾಲಾ ಮಕ್ಕಳಿಗೆ ಪಾಠ ಪ್ರವಚನ ಮಾಡಿ ಕ್ರೀಡೆಯಲ್ಲಿ ತರಬೇತಿ ನೀಡುವ ಶಿಕ್ಷಕರಿಗೆ ಇಂದು ಕ್ರೀಡಾಕೂಟ ಜರುಗುತ್ತದೆ.
ಪ್ರತಿಯೊಬ್ಬರೂ ಕೂಡ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಕ್ರೀಡಾ ಸ್ಪೂರ್ತಿಯನ್ನು ಮೆರೆಯುವುದರ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ ಪರಸ್ಪರ ಪ್ರೀತಿ ವಿಶ್ವಾಸ ಬೆಳೆಸಿಕೊಳ್ಳುವ ಮೂಲಕ ಕ್ರೀಡಾ ಸ್ಪೂರ್ತಿಯನ್ನು ಮೆರೆಯಬೇಕಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಕಾಳಿರಯ್ಯ ಶಿಕ್ಷಕರಿಗೆ ಪ್ರತಿ ವರ್ಷವೂ ಕೂಡ ಕ್ರೀಡಾಕೂಟವನ್ನು ಆಯೋಜನೆ ಮಾಡಿಕೊಂಡು ಬರುತ್ತಿದ್ದು ಬೆರಳೆಣಿಕೆಯಷ್ಟು ಶಿಕ್ಷಕರು ಮಾತ್ರ ಸ್ಪರ್ಧೆಯಲ್ಲಿ ಭಾಗವಹಿಸಿದ್ದೀರಿ ಇಂತಹ ಅವಕಾಶಗಳು ಮತ್ತೆ ಶಿಕ್ಷಕರಿಗೆ ಸಿಗುವುದಿಲ್ಲ ಚಿಕ್ಕ ಅವಕಾಶವನ್ನು ಬಳಸಿಕೊಳ್ಳಬೇಕು ಎಂದರು.
ಈ ವೇಳೆ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ರವಿಕುಮಾರ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ರವೀಶ್, ಶಿಕ್ಷಕರಾದ ದೇವರಾಜು, ಲಿಂಗರಾಜು, ಜೋಗಿ ಗೌಡ, ಮಂಜುನಾಥ ,ಮಂಜುನಾಥ, ಚಂದ್ರಶೇಖರ್, ಪ್ರಸಿಲ್ಲ, ಪ್ರೇಮ, ಇಸಿಓಗಳಾದ ಮಹೇಶ್, ಸುಬ್ರಹ್ಮಣ್ಯ, ನಟೇಶ್, ಲೋಕೇಶ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಬೈರೇಗೌಡ, ಪ್ರಭು, ಮಲ್ಲಯ್ಯ ಸೇರಿದಂತೆ ಇತರರು ಹಾಜರಿದ್ದರು.