ಮದ್ದೂರು: ತಮಿಳು ಕಾಲೋನಿಯ ಶ್ರಮಿಕರಿಗೆ ಹಕ್ಕು ಪತ್ರ ವಿತರಿಸಬೇಕು ಎಂದು ಒತ್ತಾಯಿಸಿ ಬಡಾವಣೆ ನಿವಾಸಿಗಳು ಪಟ್ಟಣದಲ್ಲಿ ಪ್ರತಿಭಟನಾ ಜಾಥಾ ನಡೆಸಿದರು.
ನಮ್ಮ ಭೂಮಿ ನಮ್ಮ ಹಕ್ಕು ಘೋಷ ವ್ಯಾಕ್ಯದೊಂದಿಗೆ ತಮಿಳು ಕಾಲೋನಿ ನಿವಾಸಿಗಳು ಉಗ್ರ ನರಸಿಂಹ ಸ್ವಾಮಿ ದೇವಾಲಯದಿಂದ ತಾಲೂಕು ಕಚೇರಿವರೆಗೆ ಜಾಥಾ ನಡೆಸಿ ಪ್ರತಿಭಟನಾ ಧರಣಿ ನಡೆಸಿದರು.
ಮದ್ದೂರಿನ ಕೆಇಬಿ ಮುಂಭಾಗದ ತಮಿಳು ಕಾಲೋನಿ ಪ್ರದೇಶವನ್ನು ಕಳೆದ 57 ವರ್ಷಗಳ ಹಿಂದೆ ಸ್ಲಂ ಎಂದು ಘೋಷಿತವಾಗಿದೆ. ಆದರೆ ಇಲ್ಲಿನ ನಿವಾಸಿಗಳಿಗೆ ಇದುವರೆಗೂ ಹಕ್ಕು ಪತ್ರ ನೀಡಿಲ್ಲ, ಬಡ ಜನರ ಸಮಸ್ಯೆ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದಾರೆ. ಶ್ರಮಿಕ ನಿವಾಸಿಗಳು ವಾಸಿಸುತ್ತಿರುವ ಪ್ರದೇಶವನ್ನು ಪ್ರದೇಶವನ್ನು ಕೊಳಚೆ ಅಭಿವೃದ್ಧಿ ಮಂಡಳಿಗೆ ಹಸ್ತಾಂತರ ಮಾಡಬೇಕು ಎಂದು ಒತ್ತಾಯಿಸಿದರು.
ಉಪ ವಿಭಾಗಾಧಿಕಾರಿ ಈಗಾಗಲೇ ಆದೇಶ ನೀಡಿದ್ದು, ತಹಶೀಲ್ದಾರ್ ಪ್ರಭಾವಿ ವ್ಯಕ್ತಿಗಳಿಗೆ ಮಣಿದು ಹಕ್ಕು ಪತ್ರ ನೀಡುತ್ತಿಲ್ಲ ಎಂದು ಆರೋಪಿಸಿದರು.