ಮದ್ದೂರು: ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ನಡೆದ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು.
ಬೆಳಿಗ್ಗೆ ಪಟ್ಟಣದ ಉಗ್ರ ನರಸಿಂಹ ಸ್ವಾಮಿ ದೇವಾಲಯದಿಂದ ಶಾಲಾ ವಾದ್ಯ ವೃಂದ ಹಾಗೂ ವಿದ್ಯಾರ್ಥಿಗಳ ಪಥ ಸಂಚಲನೆ ಯೊಂದಿಗೆ ತಾಲೂಕು ಕ್ರೀಡಾಂಗಣಕ್ಕೆ ಆಗಮಿಸಿ ಬಳಿಕ ತಹಶೀಲ್ದಾರ್ ಸೋಮಶೇಖರ್ ಹಾಗೂ ಶಾಸಕ ಕದಲೂರು ಉದಯ್ ಧ್ವಜಾರೋಹಣ ನೆರವೇರಿಸಿದರು.
ಬಳಿಕ ಶಾಸಕ ಕದಲೂರು ಉದಯ್ ಮಾತನಾಡಿ ಸ್ವಾತಂತ್ರ್ಯದ ಪ್ರತ್ಯೇಕ ನಮ್ಮ ಶಿವಪುರ ಧ್ವಜ ಸತ್ಯಾಗ್ರಹ ಸೌಧ ಮಹಾತ್ಮ ಗಾಂಧೀಜಿಯವರು ಇಲ್ಲಿಂದಲೇ ಸ್ವತಂತ್ರ ಸಂಗ್ರಾಮಕ್ಕೆ ಪ್ರಾರಂಭ ಮಾಡಿದ್ದು, ನಾವೆಲ್ಲರೂ ಕೂಡ ನೆನೆಯಬೇಕಾದ ವಿಷಯ. ಸುಭಾಷ್ ಚಂದ್ರ ಬೋಸ್, ಮಹಾತ್ಮ ಗಾಂಧಿ, ಸರ್ದಾರ್ ವಲ್ಲಭಬಾಯ್ ಪಟೇಲ್ , ಭಗತ್ ಸಿಂಗ್ ಇನ್ನು ಹತ್ತು ಹಲವು ಮಹನೀಯರು ದೇಶಕ್ಕಾಗಿ ತಮ್ಮ ಪ್ರಾಣವನ್ನು ಮುಡುಪಾಗಿಟ್ಟ ಮಹನೀಯರು. ಅವರ ಪ್ರಾಣತ್ಯಾಗದಿಂದಾಗಿ ಇಂದು ಸ್ವಾತಂತ್ರ್ಯೋತ್ಸವವನ್ನು ನಾವು ಆಚರಣೆ ಮಾಡುತ್ತ ಇದ್ದೇವೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ 12 ಜನ ಮಹನೀಯರನ್ನು ತಾಲೂಕು ಆಡಳಿತದ ವತಿಯಿಂದ ಅಭಿನಂದಿಸಲಾಯಿತು. ಕಳೆದ ಬಾರಿ ಎಸ್ ಎಸ್ ಎಲ್ ಸಿ ಯಲ್ಲಿ ಅತ್ಯುನ್ನತ ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ವತಿಯಿಂದ ಲ್ಯಾಪ್ಟಾಪ್ ಗೋಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಸಂಘ ಸಂಸ್ಥೆಯ ಪದಾಧಿಕಾರಿಗಳು ಸೇರಿದಂತೆ ಇತರರು ಹಾಜರಿದ್ದರು.