ಮಧ್ಯಪ್ರದೇಶ:ಮಧ್ಯಪ್ರದೇಶ ಚುನಾವಣೆಯಲ್ಲಿ ಸೋಲು ಅನುಭವಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷರನ್ನು ಬದಲಿಸಿದೆ. ಕಮಲ್ನಾಥ್ ಬದಲು ಮುಂದಿನ ರಾಜ್ಯಾಧ್ಯಕ್ಷರಾಗಿ ಒಬಿಸಿ ನಾಯಕ ಜಿತು ಪಟ್ವಾರಿ ನೇಮಕ ಮಾಡಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಸೋಲಿನ ನಂತರ ಕಮಲ್ ನಾಥ್ ಅವರು ರಾಜ್ಯ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಬುಡಕಟ್ಟು ಜನಾಂಗದ ನಾಯಕ ಉಮೇಶ್ ಸಿಂಘಾರ್ ಅವರನ್ನು ಮಧ್ಯಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಕಾಂಗ್ರೆಸ್ ಮಾಡಿದೆ. ಪಟ್ವಾರಿ ಅವರು ಕಮಲ್ ನಾಥ್ ಸರ್ಕಾರದಲ್ಲಿ ಉನ್ನತ ಶಿಕ್ಷಣ, ಕ್ರೀಡೆ ಮತ್ತು ಯುವ ವ್ಯವಹಾರಗಳ ಸಚಿವರಾಗಿದ್ದರು. ಅವರು ಮಾಲ್ವಾ-ನಿಮಾರ್ ಪ್ರದೇಶದಿಂದ ಬಂದವರು.
ಮಧ್ಯಪ್ರದೇಶ ಮುಖ್ಯಮಂತ್ರಿ ಮೋಹನ್ ಯಾದವ್ ಕೂಡ ಇದೇ ಪ್ರದೇಶದಿಂದ ಬಂದವರು. ಜಿತು ಪಟ್ವಾರಿ ಕೂಡ ಒಬಿಸಿ ಸಮುದಾಯದಿಂದ ಬಂದವರು ಮತ್ತು ರಾಹುಲ್ ಗಾಂಧಿಗೆ ಆಪ್ತರಾಗಿದ್ದಾರೆ.