Friday, April 4, 2025
Google search engine

Homeರಾಜ್ಯಸುದ್ದಿಜಾಲಮಡಿಕೇರಿ ದಸರಾ ಸಮಿತಿ ನಿಯೋಗದಿಂದ ಸಚಿವರ ಭೇಟಿ: ಅನುದಾನ ಬಿಡುಗಡೆಗೆ ಮನವಿ

ಮಡಿಕೇರಿ ದಸರಾ ಸಮಿತಿ ನಿಯೋಗದಿಂದ ಸಚಿವರ ಭೇಟಿ: ಅನುದಾನ ಬಿಡುಗಡೆಗೆ ಮನವಿ

ಮಡಿಕೇರಿ : ಮಡಿಕೇರಿ ದಸರಾ ಸಮಿತಿ ನಿಯೋಗ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರ ನೇತೃತ್ವದಲ್ಲಿ ಇಂದು ಬೆಂಗಳೂರಿನಲ್ಲಿ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಅವರನ್ನು ಭೇಟಿಯಾಗಿ ದಸರಾ ಉತ್ಸವ ಆಚರಣೆಗೆ ರೂ.೨ ಕೋಟಿ ಅನುದಾನವನ್ನು ಸರ್ಕಾರದಿಂದ ಬಿಡುಗಡೆಗೊಳಿಸಿ ಕೊಡಬೇಕೆಂದು ಮನವಿ ಸಲ್ಲಿಸಿದರು.

ಮುಖ್ಯಮಂತ್ರಿಗಳನ್ನು ಭೇಟಿಯಾದ ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಭರವಸೆ ನೀಡಿದರು. ಈ ಸಂದರ್ಭ ಮಡಿಕೇರಿ ದಸರಾ ಸಮಿತಿ ಅಧ್ಯಕ್ಷರು ಹಾಗೂ ನಗರಸಭಾ ಅಧ್ಯಕ್ಷರಾದ ಅನಿತಾ ಪೂವಯ್ಯ, ಕಾರ್ಯಾಧ್ಯಕ್ಷರಾದ ಪ್ರಕಾಶ್ ಆಚಾರ್ಯ, ಪ್ರಮುಖರಾದ ಟಿ.ಪಿ.ರಮೇಶ್, ಮುನಿರ್ ಅಹಮ್ಮದ್, ಪ್ರಧಾನ ಕಾರ್ಯದರ್ಶಿ ಬಿ.ವೈ.ರಾಜೇಶ್, ನಗರಸಭಾ ಸದಸ್ಯ ಅರುಣ್ ಶೆಟ್ಟಿ ಮತ್ತಿತರರು ಹಾಜರಿದ್ದರು. ಇದೇ ಸಂದರ್ಭ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೂ ನಿಯೋಗ ಮನವಿ ಪತ್ರ ಸಲ್ಲಿಸಿತು.

RELATED ARTICLES
- Advertisment -
Google search engine

Most Popular