ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜ.೨೪ ರಿಂದ ೨೭ ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ನಡೆಯಲಿದೆ.
ಫಲಪುಷ್ಪ ಪ್ರದರ್ಶನದ ಉದ್ಘಾಟನಾ ಸಮಾರಂಭವು ಜ.೨೪ ರಂದು ಮಧ್ಯಾಹ್ನ ೩ ಗಂಟೆಗೆ ನಡೆಯಲಿದೆ.
ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಭೋಸರಾಜು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕರಾದ ಡಾ.ಮಂತರ್‌ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಕೊಡಗು ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ತೋಟಗಾರಿಕೆ ಇಲಾಖೆ ನಿರ್ದೇಶಕ ಡಿ.ಎಸ್.ರಮೇಶ್, ಕೊಡಗು ಜಿಲ್ಲಾ ಹಾಪ್‌ಕಾಮ್ಸ್ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷರಾದ ಎಸ್.ಪಿ.ಪೊನ್ನಪ್ಪ, ತೋಟಗಾರಿಕೆ ಅಪರ ನಿರ್ದೇಶಕರು(ತಾಳೆ ಬೆಳೆ) ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಅಪರ ನಿರ್ದೇಶಕ ಡಾ.ಪ್ರಕಾಶ್ ಎಂ.ಸೊಬರದ, ಲಾಲ್‌ಬಾಗ್ ಕ್ಷೇತ್ರ ಮತ್ತು ನರ್ಸರಿ ತೋಟಗಾರಿಕೆ ಅಪರ ನಿರ್ದೇಶಕ ಡಾ.ಕೆ.ಎಂ.ಪರಶಿವಮೂರ್ತಿ, ಲಾಲ್‌ಬಾಗ್ ತೋಗಾರಿಕೆ ಅಪರ ನಿರ್ದೇಶಕರು(ಹಣ್ಣುಗಳು) ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಕೆ.ಬಿ.ದುಂಡಿ, ಲಾಲ್‌ಬಾಗ್ ಪಾರ್ಕ್ಸ್ ಮತ್ತು ಗಾರ್ಡನ್ ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ.ಎಂ.ಜಗದೀಶ್, ಮೈಸೂರು ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕರಾದ ಡಾ.ಎಚ್.ಎಂ.ನಾಗರಾಜ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ತೋಟಗಾರಿಕೆ ಉಪ ನಿರ್ದೇಶಕ ಯೋಗೇಶ್ ಎಚ್.ಆರ್., ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಪಣೀಂದ್ರ ಎನ್.ಎಸ್. ಇತರರು ಪಾಲ್ಗೊಳ್ಳಲಿದ್ದಾರೆ.