Sunday, April 20, 2025
Google search engine

Homeರಾಜ್ಯಸುದ್ದಿಜಾಲಮಡಿಕೇರಿ: ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಮಂಥರ್‌ಗೌಡ ಭೇಟಿ, ಪರಿಶೀಲನೆ

ಮಡಿಕೇರಿ: ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಮಂಥರ್‌ಗೌಡ ಭೇಟಿ, ಪರಿಶೀಲನೆ

ಮಡಿಕೇರಿ : ಮಡಿಕೇರಿಯ ಮಲ್ಲಿಕಾರ್ಜುನ ನಗರ ಹಾಗೂ ತ್ಯಾಗರಾಜ ಕಾಲೋನಿಯಲ್ಲಿ ಮಳೆಯಿಂದ ಹಾನಿಗೀಡಾದ ಪ್ರದೇಶಗಳಿಗೆ ಶಾಸಕ ಮಂಥರ್ ಗೌಡ ಭೇಟಿ ನೀಡಿ ಪರಿಶೀಲಿಸಿದರು.

ಭಾರೀ ಮಳೆಯಿಂದ ಗೋಡೆ ಕುಸಿದಿದ್ದು, ಮನೆ ಹಾನಿ ಪರಿಶೀಲನೆ ನಡೆಸಿದ ಶಾಸಕರು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿ ಪ್ರಕಾರ ಕೂಡಲೇ ಪರಿಹಾರ ಬಿಡುಗಡೆ ಮಾಡುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಇಲ್ಲಿನ ನಾಗರಿಕರು ಕೂಡ ಹೆಚ್ಚಿನ ಜಾಗೃತಿ ವಹಿಸಬೇಕು ಎಂದು ಶಾಸಕರು ಮನವಿ ಮಾಡಿದರು. ಈ ವೇಳೆ ಸ್ಥಳೀಯರ ಅಳಲನ್ನು ಶಾಸಕರು ಆಲಿಸಿದರು.

ನಗರದ ಸ್ಟೀವರ್ಟ್ ಹಿಲ್ ಬಳಿಯ ತ್ಯಾಜ್ಯ ಘಟಕ ಸ್ಥಳಕ್ಕೆ ಶಾಸಕ ಡಾ. ಮಂಥರಗೌಡ ಭೇಟಿ ನೀಡಿ ವೀಕ್ಷಿಸಿದರು. ಜಮೀನಿಗೆ ಸಂಬಂಧಿಸಿದಂತೆ ಪ್ರಕರಣವಿರುವುದರಿಂದ ಪರ್ಯಾಯ ಜಮೀನು ಗುರುತಿಸುವಂತೆ ಕಂದಾಯ ಹಾಗೂ ನಗರಸಭೆ ಅಧಿಕಾರಿಗಳಿಗೆ ಹೈಕೋರ್ಟ್ ಸೂಚಿಸಿದೆ. ಅದೇ ರೀತಿ ಸ್ಥಳದ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ನಗರಸಭೆ ಪೌರಾಯುಕ್ತ ವಿಜಯ್, ಪರಿಸರ ಅಭಿಯಂತರ ಸೌಮ್ಯ, ಎಇಇ ಹೇಮಂತ್ ಕುಮಾರ್ ಇತರರು ಇದ್ದರು.

ನಗರದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿ ಅಲ್ಲಿನ ವಿದ್ಯಾರ್ಥಿನಿಯರ ಅಹವಾಲು ಆಲಿಸಿದ ಶಾಸಕ ಡಾ. ಮಂಥರ್ ಗೌಡ ವಿದ್ಯಾರ್ಥಿ ಘಟಕದಲ್ಲಿ ಸ್ವಚ್ಛತೆ ಕಾಪಾಡಬೇಕು. ಶಿಕ್ಷಣದತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಸಲಹೆ ನೀಡಿದರು. ಎಲ್ಲೆಲ್ಲಿ ಸಮಸ್ಯೆಗಳಿವೆಯೋ ಅಲ್ಲಿ ಮಾಹಿತಿ ನೀಡಬೇಕು ಎಂದು ಶಾಸಕರು ಈ ಸಂದರ್ಭದಲ್ಲಿ ತಿಳಿಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶೇಖರ್, ಇತರರು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ನಗರದ ಜಿಲ್ಲಾ ಪಂಚಾಯಿತಿ ಶಾಸಕರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ ಶಾಸಕ ಮಂಥರಗೌಡ ಮಾತನಾಡಿ, ಸ್ಥಳೀಯ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲಾಗುವುದು. ಮನೆ, ವಸತಿ ಕಲ್ಪಿಸುವಂತೆ ಸಾರ್ವಜನಿಕರು ಶಾಸಕರಿಗೆ ಮನವಿ ಮಾಡಿದರು.

ಸರ್ಕಾರದ ಯೋಜನೆಗಳನ್ನು ಸರಿಯಾಗಿ ಬಳಸಿಕೊಂಡು ಅಭಿವೃದ್ಧಿಗೆ ಒತ್ತು ನೀಡಿ. ಸಮಸ್ಯೆಗಳಿದ್ದರೆ, ಅದನ್ನು ಗಮನಿಸಬೇಕು. ಅವರ ಅಹವಾಲುಗಳನ್ನು ಆದಷ್ಟು ಬೇಗ ಪರಿಹರಿಸಲಾಗುವುದು ಎಂದು ಶಾಸಕ ಡಾ. ಮಂಥರ್ ಗೌಡ ಮಾಹಿತಿ ನೀಡಿದರು. ಕಾರ್ಯಪ್ಪ ವೃತ್ತದ ಬಳಿ ಇರುವ ಗುಡ್ಡೆಮನೆ ಅಪ್ಪಯ್ಯಗೌಡರ ಪ್ರತಿಮೆ ಆವರಣವನ್ನು ಮತ್ತಷ್ಟು ಅಭಿವೃದ್ಧಿ ಪಡಿಸುವ ಕುರಿತು ಮಾಹಿತಿ ಪಡೆದ ನಗರದ ಫೀಲ್ಡ್ ಮಾರ್ಷಲ್ ಕೆ.ಎಂ. ಅಭಿವೃದ್ಧಿ ಕುರಿತು ಅಂದಾಜು ಪಟ್ಟಿ ಸಲ್ಲಿಸುವಂತೆ ಶಾಸಕರು ಎಂಜಿನಿಯರ್ ಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೆಂಕಟ್ ರಾಜಾ, ನಾಗರಿಕ ವಿಜಯ್ ಇತರರು ಉಪಸ್ಥಿತರಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ರಾಜ್ಯದಲ್ಲಿ ೧೦೦ ಸಂಖ್ಯೆಯ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರಿಗೆ ೧೫೦ ಹೊಸ ವಿದ್ಯಾರ್ಥಿ ಭವನಗಳನ್ನು ಮಂಜೂರು ಮಾಡಿ ಸರಕಾರ ಆದೇಶ ಹೊರಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸಕ್ತ ಸಾಲಿನ ಆಯವ್ಯಯ ಭಾಷಣದಲ್ಲಿ ಪ್ರಕಟಿಸಿದ್ದಾರೆ.

ಆ ನಿಟ್ಟಿನಲ್ಲಿ ಕೊಡಗು ಜಿಲ್ಲೆಗೆ ಜಿಲ್ಲಾ ಕೇಂದ್ರದಲ್ಲಿ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ಶಾಲೆ ಆರಂಭಿಸಲು ಸರಕಾರ ಅನುಮೋದನೆ ನೀಡಿದೆ. ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಹಾಗೂ ಶಾಸಕ ಡಾ.ಮಂಥರ್ ಗೌಡ ಅವರ ಪ್ರಯತ್ನದಿಂದಾಗಿ ಕೊಡಗು ಜಿಲ್ಲೆಯಲ್ಲಿ ಎರಡು ಮೆಟ್ರಿಕ್ ವಿದ್ಯಾರ್ಥಿ ಭವನ ಆರಂಭಿಸಲು ಸರಕಾರ ಅನುಮತಿ ನೀಡಿದೆ.

RELATED ARTICLES
- Advertisment -
Google search engine

Most Popular