ಪ್ರಯಾಗ್‌ರಾಜ್: 45 ದಿನ ಗಳ ಕಾಲ ಉತ್ತರ ಪ್ರದೇಶದಪ್ರಯಾಗ್ ರಾಜ್‌ನಲ್ಲಿ ನಡೆದ ಮಹಾಕುಂಭ ಮೇಳಕ್ಕೆ ನಿನ್ನೆ ತೆರೆ ಬಿದ್ದಿದೆ.ಜಗತ್ತಿನ ಅತಿದೊಡ್ಡ ಮಹಾ ಕುಂಭ ಮೇಳದಲ್ಲಿ 65 ಕೋಟಿಗೂ ಹೆಚ್ಚು ಭಕ್ತರು ಪುಣ್ಯ ಸ್ನಾನ ಮಾಡಿ ವಿಶ್ವ ದಾಖಲೆ ಬರೆದಿದ್ದಾರೆ.
ಶಿವರಾತ್ರಿಯ ಹಿನ್ನೆಲೆಯಲ್ಲಿ ನಡೆದ ಕೊನೆಯ ಅಮೃತಸ್ನಾನದಲ್ಲಿ ಒಂದು ಕೋಟಿಗೂ ಅಧಿಕ ಜನರು ಭಾಗಿಯಾಗಿ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡಿ ಪುನೀತರಾದರು.
ತ್ರಿವೇಣಿ ಸಂಗಮದಲ್ಲಿ ಕೋಟ್ಯಂತರ ಭಕ್ತರು ಬ್ರಾಹ್ಮೀ ಮುಹೂರ್ತದಲ್ಲಿ ಪುಣ್ಯಸ್ನಾನ ಮಾಡಿದರು. ಸುಮಾರು 40 ಲಕ್ಷ ಭಕ್ತರು ಅಮೃತ ಸ್ನಾನ ಮಾಡಿದರು. ಅಮೃತಸ್ನಾನ ಮಾಡಲು ಬಂದಿದ್ದ ಭಕ್ತರ ಮೇಲೆ ಹೆಲಿಕಾಪ್ಟರ್ ಮೂಲಕ ಪುಷ್ಪವೃಷ್ಟಿ ಮಾಡಲಾಯಿತು.