Friday, April 4, 2025
Google search engine

Homeಅಪರಾಧಮಹಾಲಕ್ಷ್ಮಿ ಕೊಲೆ ಪ್ರಕರಣ: ಹಂತಕನ ಡೆತ್‌ ನೋಟ್‌ನಲ್ಲಿ ಹತ್ಯೆಯ ರಹಸ್ಯ ಬಯಲು

ಮಹಾಲಕ್ಷ್ಮಿ ಕೊಲೆ ಪ್ರಕರಣ: ಹಂತಕನ ಡೆತ್‌ ನೋಟ್‌ನಲ್ಲಿ ಹತ್ಯೆಯ ರಹಸ್ಯ ಬಯಲು

ಬೆಂಗಳೂರು: ವೈಯಾಲಿಕಾವಲ್‌ನಲ್ಲಿ ಮಹಾಲಕ್ಷ್ಮಿ ಕೊಲೆ ಆರೋಪಿ ಆತ್ಮಹತ್ಯೆಗೆ ಶರಣಾಗಿದ್ದು, ಹತ್ಯೆಗೆ ಕಾರಣ ತಿಳಿಸಿ ಆತ ಬರೆದಿಟ್ಟಿರುವ ಡೆತ್‌ನೋಟ್ ಪೊಲೀಸರಿಗೆ ದೊರಕಿದೆ.

ಕೊಲೆ ಆರೋಪಿ ಮುಕ್ತಿ ರಂಜನ್ ರಾಯ್ ಒಡಿಶಾದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮುನ್ನ ಮಹಾಲಕ್ಷ್ಮಿ ಕೊಲೆಗೆ ಕಾರಣವನ್ನು ಡೆಟ್‌ನೋಟ್‌ನಲ್ಲಿ ಬರೆದಿಟ್ಟಿದ್ದ. ಡೈರಿಯಲ್ಲಿ ಡೆತ್‌ನೋಟ್ ಇರುವುದನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ಸೆಪ್ಟಂಬರ್ ೩ ರಂದು ಪ್ರೇಯಸಿ ಮಹಾಲಕ್ಷ್ಮೀಯನ್ನು ಹತ್ಯೆ ಮಾಡಿದ್ದೇನೆ ಎಂದು ಆರೋಪಿ ಮುಕ್ತಿ ರಂಜನ್ ರಾಯ್ ಉಲ್ಲೇಖಿಸಿದ್ದಾನೆ. ಸೆ.೩ ರಂದು ಆಕೆಯ ಮನೆಗೆ ಹೋದಾಗ ಕೃತ್ಯ ಎಸಗಿದ್ದೇನೆ. ವೈಯಕ್ತಿಕ ವಿಚಾರಗಳಿಗೆ ಆಕೆ ಜೊತೆ ಜಗಳವಾಯಿತು. ಆಗ ಆಕೆ ಹಲ್ಲೆ ನಡೆಸಿದಳು. ಇದರಿಂದ ಕೋಪಗೊಂಡು ಆಕೆಯನ್ನು ಕೊಂದೆ. ಆ ಬಳಿಕ ೫೯ ಪೀಸ್ ಮಾಡಿ ಫ್ರಿಡ್ಜ್ನಲ್ಲಿ ಇರಿಸಿದ್ದೆ. ಆಕೆಯ ವರ್ತನೆಯಿಂದ ಬೇಸತ್ತು ಕೃತ್ಯ ಎಸಗಿದ್ದೇನೆ ಎಂದು ಡೆತ್‌ನೋಟ್ ಬರೆದುಕೊಂಡಿದ್ದಾನೆ.

RELATED ARTICLES
- Advertisment -
Google search engine

Most Popular