ಮುಂಬೈ: ಮಹಾರಾಷ್ಟ್ರದ 15ನೇ ವಿಧಾನಸಭೆಯ ಸ್ಪೀಕರ್ ಆಗಿ ಬಿಜೆಪಿ ಶಾಸಕ ರಾಹುಲ್ ನಾರ್ವೆಕರ್ ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಾರ್ವೆಕರ್ ಭಾನುವಾರ ನಾಮಪತ್ರ ಸಲ್ಲಿಸಿದ್ದರು. ವಿರೋಧ ಪಕ್ಷಗಳ ಮೈತ್ರಿಕೂಟದ ಮಹಾವಿಕಾಸ್ ಅಘಾಡಿ ಸದಸ್ಯರು ಸ್ಪರ್ಧಿಸದಿರಲು ನಿರ್ಧರಿಸಿದ್ದರಿಂದ ರಾಹುಲ್ ಅವಿರೋಧವಾಗಿ ಆಯ್ಕೆಯಾದರು.
ಮೂರು ದಿನಗಳ ವಿಶೇಷ ಅಧಿವೇಶನದ ಕೊನೆಯ ದಿನವಾದ ಇಂದು ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕ ಸ್ಥಾನ ಮತ್ತು ಉಪಸಭಾಪತಿ ಸ್ಥಾನವನ್ನು ಪ್ರತಿಪಕ್ಷ ಎಂವಿಎ ಕೋರಿದೆ. ಈ ಮಧ್ಯೆ ದೇವೇಂದ್ರ ಫಡ್ನಾವೀಸ್ ನೇತೃತ್ವದ ಸರ್ಕಾರ ಡಿಸೆಂಬರ್ 11ರಂದು ಸಂಪುಟ ವಿಸ್ತರಣೆ ಮಾಡುವ ಸಾಧ್ಯತೆ ಇದೆ.