Friday, April 18, 2025
Google search engine

HomeUncategorizedರಾಷ್ಟ್ರೀಯಮಹಾರಾಷ್ಟ್ರ, ಜಾರ್ಖಂಡ್​ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ಮಹಾರಾಷ್ಟ್ರ, ಜಾರ್ಖಂಡ್​ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

ನವದೆಹಲಿ: ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ. ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ಜಾರ್ಖಂಡ್​ನಲ್ಲಿ ನವೆಂಬರ್ 13 ಹಾಗೂ ನವೆಂಬರ್ 20ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಈ ಕುರಿತು ಮುಖ್ಯ ಚುನಾವಣಾಧಿಕಾರಿ ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.

ಅಕ್ಟೋಬರ್ 22ರಂದು ಅಧಿಸೂಚನೆ ಹೊರಬೀಳಲಿದೆ, ನವೆಂಬರ್ 4 ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿದೆ. ಮತ ಎಣಿಕೆ ನವೆಂಬರ್ 23 ರಂದು ನಡೆಯಲಿದೆ. ಮೊದಲ ಹಂತದಲ್ಲಿ ಜಾರ್ಖಂಡ್​ನಲ್ಲಿ ಅಕ್ಟೋಬರ್ 18ರಂದು ಅಧಿಸೂಚನೆ ಹೊರಬೀಳಲಿದೆ, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 25 ಕೊನೆಯ ದಿನಾಂಕವಾಗಿರುತ್ತದೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 30 ಕೊನೆಯ ದಿನಾಂಕ, ನವೆಂಬರ್ 23ರಂದು ಮತ ಎಣಿಕೆ ನಡೆಯಲಿದೆ.

ಎರಡನೇ ಹಂತದಲ್ಲಿ ಅಕ್ಟೋಬರ್ 22ಕ್ಕೆ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಕೆಗೆ ಅಕ್ಟೋಬರ್ 29 ಕೊನೆಯ ದಿನಾಂಕವಾಗಿರಲಿದೆ, ಅಕ್ಟೋಬರ್ 28ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಅಕ್ಟೋಬರ್ 30ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕವಾಗಿರಲಿದೆ. ನವೆಂಬರ್ 20ರಂದು ಮತದಾನ ನಡೆಯಲಿದ್ದು, ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ.

ಚುನಾವಣಾ ಆಯೋಗವು 48 ವಿಧಾನಸಭಾ ಸ್ಥಾನಗಳು ಮತ್ತು ಎರಡು ಲೋಕಸಭಾ ಸ್ಥಾನಗಳಿಗೆ ಉಪಚುನಾವಣೆಯ ವೇಳಾಪಟ್ಟಿಯನ್ನು ಸಹ ಪ್ರಕಟಿಸಿದೆ.

288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂಬರ್ 26 ರಂದು ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯ ಅವಧಿಯು ಜನವರಿ 5, 2025 ರಂದು ಕೊನೆಗೊಳ್ಳಲಿದೆ.

ಮಹಾರಾಷ್ಟ್ರದಲ್ಲಿ 9.63 ಕೋಟಿ ಅರ್ಹ ಮತದಾರರಿದ್ದು, ಜಾರ್ಖಂಡ್ ನಲ್ಲಿ 2.6 ಕೋಟಿ ಮತದಾರರಿದ್ದಾರೆ ಎಂದು ರಾಜೀವ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular