Saturday, April 19, 2025
Google search engine

Homeಸ್ಥಳೀಯಅರ್ಥ ಪೂರ್ಣವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಡಾ .ಕೆ ವಿ ರಾಜೇಂದ್ರ

ಅರ್ಥ ಪೂರ್ಣವಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ: ಡಾ .ಕೆ ವಿ ರಾಜೇಂದ್ರ

ಮೈಸೂರು: ಎಲ್ಲಾ ಸಮುದಾಯಗಳ ಜನರು ಸೇರಿ ಅರ್ಥಪೂರ್ಣವಾಗಿ ಅದ್ಧೂರಿಯಾಗಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಮಾಡೋಣ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.

ಇಂದು ಬಾಬು ಜಗಜೀವನ್ ರಾಮ್ ಭವನದ ಸಭಾಂಗಣದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಯಂತಿಗಳು ಕೇವಲ ಒಂದು ಸಮುದಾಯಕ್ಕೆ ಸೀಮಿತವಾಗಬಾರದು. ಎಲ್ಲಾ ಸಮುದಾಯಗಳು ಸೇರಿ ಆಚರಣೆ ಮಾಡಬೇಕು ಎಂದರು.

ಜಯಂತಿಯನ್ನು ಅಕ್ಟೋಬರ್ 28 ರಂದು ಆಚರಿಸಲಾಗುವುದು. ಅಂದು ಬೆಳಿಗ್ಗೆ 10.00 ಗಂಟೆಗೆ ಮೆರವಣಿಗೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಿಂದ ಆರಂಭವಾಗಿ, ಕಲಾ ಮಂದಿರದ ವರೆಗೆ ಬರುತ್ತದೆ. ನಂತರ ಕಲಾ ಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯುತ್ತದೆ. ಆದಿವಾಸಿ ಹಾಗೂ ಗಿರಿಜನ ಸಮುದಾಯದ ಮಕ್ಕಳು ಉತ್ತಮವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡುತ್ತಾರೆ. ಇವರನ್ನು ಗುರುತಿಸಿ ಕಾರ್ಯಕ್ರಮಕ್ಕೆ ಕರೆತಂದು ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನ ಮಾಡಿಸಲಾಗುವುದು. ಇದರಿಂದ ಅವರನ್ನು ಮುಖ್ಯ ವಾಹಿನಿಗೆ ತರಲು ಸಾಧ್ಯವಾಗುತ್ತದೆ ಎಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಸ್ವಚ್ಛತೆಯನ್ನು ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಮಾಡಲಾಗುವುದು. ಜಯಂತಿಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ವಾಲ್ಮೀಕಿ ಭವನದ ನಿರ್ಮಾಣವನ್ನು ಸಂಪೂರ್ಣ ಮಾಡಿಸಿ ಮುಂದಿನ ವರ್ಷದ ವಾಲ್ಮೀಕಿ ಜಯಂತಿಯ ಪೂರ್ವಭಾವಿ ಸಭೆಯನ್ನು ಅಲ್ಲಿಯೇ ಮಾಡಲಾಗುವುದು ಎಂದು ಭರವಸೆ ನೀಡಿದರು.

ಸಮುದಾಯದ ಮುಖಂಡರು ಮಾತನಾಡಿ ಮಹರ್ಷಿ ವಾಲ್ಮೀಕಿಗೆ ಜಿಲ್ಲಾಡಳಿತ ವತಿಯಿಂದ ಸ್ಥಬ್ದ ಚಿತ್ರ ಮೆರವಣಿಗೆ ಮಾಡಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಯುವ ಸಂಭ್ರಮದಲ್ಲಿ ಉತ್ತಮ ಪ್ರದರ್ಶನ ನೀಡಿದ ವಿಶ್ವವಿದ್ಯಾನಿಲಯದ ಕನಿಷ್ಟ 05 ಕಲಾ ತಂಡಗಳನ್ನು ನೀಡಬೇಕು. ಮೆರವಣಿಗೆಯಲ್ಲಿ ವೀರಗಾಸೆ ಹಾಗೂ ಡೊಳ್ಳು ಕುಣಿತವನ್ನು ಕಲಾ ತಂಡಗಳು ಮಾಡಬೇಕು. ಮೆರವಣಿಗೆಗೆ ಪೊಲೀಸ್ ಬ್ಯಾಂಡ್ ವ್ಯವಸ್ಥೆ ಮಾಡಬೇಕು. ಮುಖ್ಯ ಭಾಷಣಕಾರರಾಗಿ ಪ್ರೊ. ಪ್ರಶಾಂತ್ ನಾಯಕ್ ಅವರನ್ನು ಕರೆಯಬೇಕು. ಆದಿವಾಸಿಗಳ ಕಲಾ ತಂಡಗಳನ್ನು ಕಾರ್ಯಕ್ರಮಕ್ಕೆ ಆಹ್ವಾನ ಮಾಡಿ ಅವರಿಂದ ಪ್ರದರ್ಶನ ಮಾಡಿಸಬೇಕು. ಮೈಸೂರಿನ ಕಸಬಾ ಹೋಬಳಿಯಲ್ಲಿ ಸಮುದಾಯಕ್ಕೆ ಒಂದು ಸಮುದಾಯ ಭವನ ಮಾಡಿಸಬೇಕು.

ಕಾರ್ಯಕ್ರಮದಲ್ಲಿ ಸಮುದಾಯದ ಮುಖಂಡರು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular