ಮಂಡ್ಯ: ಇಂದು ಮಹಾತ್ಮ ಗಾಂಧಿ ಜಯಂತಿ ಹಿನ್ನಲೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.
ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯ ಕಾವೇರಿ ವನದಲ್ಲಿರುವ ಗಾಂಧಿ ಪ್ರತಿಮೆಗೆ ಎಡಿಸಿ ಹೆಚ್.ಎಲ್.ನಾಗರಾಜು ಮಾಲಾರ್ಪಣೆ ಮಾಡಿ ಪುಷ್ಪಾರ್ಚನೆ ಮಾಡಿದರು.
ಬಳಿಕ ಸ್ವತಃ ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.
ನಂತರ ನೂರಾರು ಮಂದಿ ರಕ್ತದಾನ ಮಾಡಿದರು.
ಕಾರ್ಯಕ್ರಮದಲ್ಲಿ ಶಾಸಕ ಗಣಿಗ ರವಿಕುಮಾರ್, ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.
