Thursday, April 3, 2025
Google search engine

Homeದೇಶಮಹಾತ್ಮ ಗಾಂಧಿಯವರ ಆಲೋಚನೆಗಳು, ಬೋಧನೆಗಳು ನಮ್ಮ ಹಾದಿಯನ್ನು ಸದಾ ಬೆಳಗುತ್ತಿರುತ್ತದೆ: ಪ್ರಧಾನಿ ಮೋದಿ

ಮಹಾತ್ಮ ಗಾಂಧಿಯವರ ಆಲೋಚನೆಗಳು, ಬೋಧನೆಗಳು ನಮ್ಮ ಹಾದಿಯನ್ನು ಸದಾ ಬೆಳಗುತ್ತಿರುತ್ತದೆ: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ೧೫೪ನೇ ಗಾಂಧಿ ಜಯಂತಿಯ ಅಂಗವಾಗಿ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು. ಗಾಂಧಿಯವರ ಮಾತುಗಳು ಹಾಗೂ ಆಲೋಚನೆಗಳು ಜಾಗತಿಕ ಮತ್ತು ಇಡೀ ಮಾನವಕುಲವನ್ನು ಏಕತೆ ಹಾಗೂ ಸಹಾನುಭೂತಿಯೆಡೆಗೆ ಪ್ರೇರೇಪಿಸುತ್ತದೆ ಎಂದು ಮೋದಿ ಹೇಳಿದ್ದಾರೆ.

ಗಾಂಧಿ ಜಯಂತಿಯ ವಿಶೇಷ ಸಂದರ್ಭದಲ್ಲಿ ನಾನು ಮಹಾತ್ಮ ಗಾಂಧಿ ಅವರಿಗೆ ನಮಸ್ಕರಿಸುತ್ತೇನೆ. ಅವರ ಕಾಲಾತೀತ ಬೋಧನೆಗಳು ನಮ್ಮ ಹಾದಿಯನ್ನು ಬೆಳಗಿಸುತ್ತಲೇ ಇರುತ್ತವೆ. ಅವರ ಕನಸುಗಳನ್ನು ನನಸಾಗಿಸಲು ನಾವು ಯಾವಾಗಲೂ ಕೆಲಸ ಮಾಡೋಣ, ಎಲ್ಲರೂ ಏಕತೆ ಮತ್ತು ಸೌಹಾರ್ದತೆಯನ್ನು ಬೆಳೆಸಿಕೊಳ್ಳಲಿ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮಹಾತ್ಮ ಗಾಂಧಿಯವರ ಅಹಿಂಸೆ ಮತ್ತು ಸಹಿಷ್ಣುತೆಯ ಮೌಲ್ಯಗಳನ್ನು ಗೌರವಿಸಲು ಈ ದಿನವನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ. ಗಾಂಧಿ ಜಯಂತಿ ಅಂಗವಾನಿ ಒಂದು ದಿನದ ಹಿಂದಷ್ಟೇ ರಾಷ್ಟ್ರಮಟ್ಟದಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಯಿತು. ನರೇಂದ್ರ ಮೋದಿ ಅಷ್ಟೇ ಅಲ್ಲದೆ, ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಕೂಡ ರಾಜ್‌ಘಾಟ್‌ಗೆ ತೆರಳಿ ಮಹಾತ್ಮ ಗಾಂಧಿಯನ್ನು ಸ್ಮರಿಸಿದರು.

RELATED ARTICLES
- Advertisment -
Google search engine

Most Popular