Saturday, April 19, 2025
Google search engine

Homeಸ್ಥಳೀಯಮಹಿಷ ಮಂಡಲೋತ್ಸವ/ಮಹಿಷ ದಸರಾ: ನಿಷೇಧಾಜ್ಞೆ ಜಾರಿ

ಮಹಿಷ ಮಂಡಲೋತ್ಸವ/ಮಹಿಷ ದಸರಾ: ನಿಷೇಧಾಜ್ಞೆ ಜಾರಿ

ಮೈಸೂರು: ಮಹಿಷ ದಸರಾದ ಹಿನ್ನೆಲೆ ಸೆಪ್ಟೆಂಬರ್ 29 ರಂದು ಬೆಳಗ್ಗೆ 8:30 ಗಂಟೆಗೆ ಚಾಮುಂದಿಬೆಟ್ಟದಲ್ಲಿನ ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆ ಕಾರ್ಯಕ್ರಮ ಮತ್ತು ಬೆಳಗ್ಗೆ 10:30 ಗಂಟೆಗೆ ನಗರದ ಪುರ ಭವನದ ಹೊರಾವರಣದಲ್ಲಿ ಮಹಿಷ ಮಂಡಲೊತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾನೂನು ಮತ್ತು ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿನ ಚಾಮುಂಡಿ ಬೆಟ್ಟ ಸೇರಿದಂತೆ (ಟೌನ್ ಹಾಲ್ ಒಳ ಅವರಣ ಹೊರತುಪಡಿಸಿ) ಸೆ.28 ರ ಮಧ್ಯರಾತ್ರಿ 12 ಗಂಟೆಯಿಂದ ಸೆ. 30 ರ ಬೆಳಗ್ಗೆ 06 ಗಂಟೆಯವರೆಗೆ ಮಹಿಷ ಮಂಡಲೋತ್ಸವ / ಮಹಿಷ ದಸರಾದ ಪರ ವಿರೋಧವಾಗಿ ನಡೆಸುವ ಈ ಕೆಳಕಂಡವುಗಳನ್ನು ನಿಷೇಧಿಸಿ ಕಲಂ 163 ಬಿ.ಎನ್.ಎಸ್.ಎಸ್ ಕಾಯ್ದೆ-2023 ರೀತ್ಯ ನಿಷೇಧಾಜ್ಞೆಯನ್ನು ಹೊರಡಿಸಲಾಗಿದೆ.

ಈ ಸಂದರ್ಭದಲ್ಲಿ ಯಾವುದೇ ಮೆರವಣಿಗೆ ಪ್ರತಿಭಟನೆ ರ್ಯಾಲಿ ಬೈಕ್ ರ್ಯಾಲಿ ನಡೆಸುವುದು, ಪರ-ವಿರೋಧ ಘೋಷಣೆ ಕೂಗುವುದು, ಪಟಾಕಿ ಸಿಡಿಸಿ ಸಂಭ್ರಮಾಚರಣೆ ಆಚರಿಸುವುದು, 05 ಜನರಿಗಿಂತ ಹೆಚ್ಚಿನ ಜನ ಗುಂಪು ಸೇರುವುದು, ಯಾವುದೇ ಬಹಿರಂಗ ಸಭೆ ಸಮಾರಂಭಗಳನ್ನು ನಡೆಸುವುದು ಹಾಗೂ ಯಾವುದೇ ಸಾರ್ವಜನಿಕ ಸ್ಥಳದಲ್ಲಿ ಪ್ರಚಾರ, ದ್ವನಿವರ್ಧಕ ಬಳಸುವುದು, ಫ್ಲೆಕ್ಸ್,ಬ್ಯಾನರ್ ಅಳವಡಿಸುವುದು ಕರಪತ್ರಗಳನ್ನು ಹಂಚುವುದು ಮೂರ್ತಿ ಮೆರವಣಿಗೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿರುತ್ತದೆ.

ಯಾವುದೇ ಸಂಘಟನೆ ಅಥವಾ ಸಾರ್ವಜನಿಕರು ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಹಾಗೂ ಸಭೆ- ಸಮಾರಂಭ ಮೆರವಣಿಗೆ, ಪ್ರತಿಭಟನೆ, ರ್ಯಾಲಿ ನಡೆಸಲು ಪ್ರಯತ್ನಿಸಿದಲ್ಲಿ ಅಲ್ಲಿ ಸೇರಿರುವ ಜನರ ಕೂಟವನ್ನು ಅಕ್ರಮ ಕೂಟವೆಂದು ಪರಿಗಣಿಸಿ, ಆದೇಶ ಉಲ್ಲಂಘನೆ ಕುರಿತಂತೆ ಕಾನೂನು ಕ್ರಮಕೈಗೊಳ್ಳಲಾಗುತ್ತದೆ.

ಈ ಆದೇಶವು ಮದುವೆ ಸಮಾರಂಭಗಳಿಗೆ ಮತ್ತು ಶವ ಸಂಸ್ಕಾರಗಳಿಗೆ ಹಾಗೂ ಶಾಲಾ-ಕಾಲೇಜು ಮತ್ತು ಪರೀಕ್ಷೆಗಳಿಗೆ ತೆರಳುವವರಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular