ಮಂಡ್ಯ: ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಆರೋಗ್ಯ ಸೇವಾ ಸೌಲಭ್ಯಗಳನ್ನು ಪ್ರತಿಯೊಬ್ಬರು ಸದುಪಯೋಗ ಪಡಿಸಿಕೊಂಡು ಉತ್ತಮ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕೆಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ರವೀಂದ್ರ ಹೇಳಿದರು.
ಪಟ್ಟಣದ ಎಚ್.ಕೆ.ವೀರಣ್ಣಗೌಡ ಕಾಲೇಜಿನಲ್ಲಿ ಮಂಡ್ಯ ಲಯನ್ಸ್ ಸಂಸ್ಧೆ ಹಾಗೂ ಎಂ.ಹೆಚ್.ಚನ್ನೇಗೌಡ ವಿದ್ಯಾನಿಲಯದ ವತಿಯಿಂದ ಆಯೋಜಿಸಿದ್ದ ಆಯುಷ್ಮಾನ್ ಭಾರತ್ ಹಾಗೂ ಜನ ಆರೋಗ್ಯ ಯೋಜನೆ ನೊಂದಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಕೇಂದ್ರದ ಆಯುಷ್ಮಾನ್ ಭಾರತ್ ಯೋಜನೆಯು 2019ರಿಂದ ಜಾರಿಗೆ ಬಂದಿದ್ದು ಮಂಡ್ಯ ಜಿಲ್ಲೆಯಲ್ಲಿ ಯೋಜನೆಯು ಸಾಕಷ್ಟು ಪ್ರಮಾಣದಲ್ಲಿ ನೊಂದಣಿಯಾಗಿಲ್ಲ ಎಂದು ವಿಷಾದಿಸಿದ ಅವರು ಸಂಘ ಸಂಸ್ಧೆಗಳು ಸೇರಿದಂತೆ ಶಿಕ್ಷಣ ಸಂಸ್ಧೆಗಳು ಗ್ರಾಮೀಣ ಪ್ರದೇಶದ ಜನರಿಗೆ ಯೋಜನೆಯ ಬಗ್ಗೆ ಅರಿವು ಮೂಢಿಸಿ ಹೆಚ್ಚಿನ ಸಂಖ್ಯೆಯಲ್ಲಿ ನೊಂದಣಿಯನ್ನು ಮಾಡಿಸುವಂತೆ ಇತರರಿಗೂ ಯೋಜನೆಯ ಬಗ್ಗೆ ಅರಿವು ಮೂಡಿಸಬೇಕೆಂದು ಹೇಳಿದರು.
ಯೋಜನೆಯ ಫಲಾನುಭವಿಗಳು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬಿ.ಪಿ.ಎಲ್ ಕಾರ್ಡದಾರರು 5 ಲಕ್ಷದವರೆಗೆ ಉಚಿತ ಚಿಕಿತ್ಸೆ ಪಡೆಯಬಹುದಲ್ಲದೇ ಅಗತ್ಯ ಸಮಯದಲ್ಲಿ ಇನ್ನು ಹೆಚ್ಚಿನ ಚಿಕಿತ್ಸೆಯನ್ನು ಪಡೆಯಬಹುದು ಎಂದರಲ್ಲದೇ ಎ.ಪಿ.ಎಲ್ ಕಾರ್ಡದಾರರು 1.5 ಲಕ್ಷದವರೆಗೆ ಚಿಕಿತ್ಸೆ ಪಡೆಯಬಹುದಾಗಿದೆ ಎಂದ ಅವರು ಮುಂದಿನ ದಿನಗಳಲ್ಲಿ ಆರೋಗ್ಯ ಕಾರ್ಡಿನ ಅವಶ್ಯಕತೆ ಹೆಚ್ಚಿನ ಪ್ರಮಾಣದಲ್ಲಿ ಉಪಯುಕ್ತವಾಗಲಿದೆ ಎಂದು ಅವರು ಹೇಳಿದರು.

ಮಂಡ್ಯ ಲಯನ್ಸ್ ಸಂಸ್ಧೆಯ ಅಧ್ಯಕ್ಷ ಅನಂತು ಮಾತನಾಡಿ ಲಯನ್ಸ್ ಸಂಸ್ಧೆಯು ಗ್ರಾಮೀಣ ಪ್ರದೇಶದ ಜನರಿಗೆ ಮತ್ತು ಬಡ ವಿದ್ಯಾರ್ಥಿಗಳಿಗೆ ಆರೋಗ್ಯ ಸಮಸ್ಯೆಗಳಿಗೆ ಸಹಕಾರಿಯಾಗಲಿ ಎಂದು ಹಲವು ಶಿಬಿರಗಳನ್ನು ಆಯೋಜಿಸುತ್ತಿದ್ದು, ಚಿಕಿತ್ಸೆಗಾಗಿ ಆರ್ಥಿಕ ಸಹಾಯ ಮಾಡಲಾಗುತ್ತಿದ್ದೆ ಎಂದ ಅವರು ಉತ್ತಮ ಗುಣಮಟ್ಟದ ಪೌಷ್ಟಿಕಾಂಶ ಆಹಾರಗಳನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳುಮ ಮೂಲಕ ಆರೋಗ್ಯವಂತರಾಗಬೇಕೆಂದರು.
ಈ ವೇಳೆ ಎಂ.ಹೆಚ್.ಚನ್ನೇಗೌಡ ವಿದ್ಯಾ ಸಂಸ್ಧೆಯ ಕಾರ್ಯದರ್ಶಿ ಸಿ. ಅಪೂರ್ವಚಂದ್ರ, ಪ್ರಾಂಶುಪಾಲರಾದ ಜಿ.ಎಸ್.ಶಂಕರೇಗೌಡ, ಯು.ಎಸ್.ಶಿವಕುಮಾರ್, ಲಯನ್ಸ್ ಸಂಸ್ಧೆಯ ಗರುಪಾದಸ್ವಾಮಿ, ಹರ್ಷ, ಉಪನ್ಯಾಸಕರಾದ ಹೆಚ್.ಎಸ್.ಪಂಚಲಿಂಗೇಗೌಡ, ಜಿ.ಎಸ್.ನಂದಿನಿ, ಎನ್.ರೇವಣ್ಣ, ಸಿ.ಜಯವರ್ಧನ್, ಬಿ.ಸಿ.ಶಿವಕುಮಾರ್, ಮೋಹನ್‌ಕುಮಾರ್ , ಮುಖ್ಯಶಿಕ್ಷಕರಾದ ಎನ್.ಕೃಷ್ಣ, ಎಂ.ಟಿ.ಚಂದ್ರಶೇಖರ್, ಧರ್ಮಸ್ಧಳ ಗ್ರಾಮಾಭಿವೃದ್ದಿ ಸಂಸ್ಧೆಯ ರಾಜೇಶ್, ಸುರಕ್ಷಾ ಹಾಗೂ ಗ್ರಾಮ ಒನ್ ಸಂಸ್ಧೆಯ ನೌಕರರು ಹಾಜರಿದ್ದರು.