Thursday, April 3, 2025
Google search engine

Homeಅಡುಗೆಕೇವಲ 10 ನಿಮಿಷದಲ್ಲಿ ಮಾಡಿ ಪನೀರ್ ಪಕೋಡ

ಕೇವಲ 10 ನಿಮಿಷದಲ್ಲಿ ಮಾಡಿ ಪನೀರ್ ಪಕೋಡ

ಚುಮುಚುಮು ಚಳಿಗೆ ಚಹಾದೊಂದಿಗೆ ಬಿಸಿಬಿಸಿಯಾಗಿ ತಿನ್ನಲು ಏನಾದರೂ ಸಿಕ್ಕರೆ ಅದರಲ್ಲಿ ಸಿಗುವ ಆನಂದವೇ ಬೇರೆ. ಅದರಲ್ಲೂ ಬಜ್ಜಿ, ಪಕೋಡ ಮುಂತಾದ ತಿನಿಸುಗಳು ಮನಸ್ಸಿಗೆ ಇನ್ನೂ ಮುದನೀಡುವುದಲ್ಲದೇ ಬಾಯಿಗೂ ರುಚಿಕೊಡುತ್ತದೆ. ಇವತ್ತಿನ ನಮ್ಮ ರೆಸಿಪಿಯಲ್ಲಿ ಕೇವಲ 10 ನಿಮಿಷದಲ್ಲಿ ತಯಾರಿಸಬಹುದಾದ ಪನೀರ್ ಪಕೋಡ ರೆಸಿಪಿ ಹೇಗೆ ಮಾಡುವುದು ಎಂಬುದನ್ನು ತಿಳಿಸುತ್ತಿದ್ದೇವೆ. ಹಾಗಿದ್ರೆ ಇದನ್ನು ಯಾವರೀತಿ ಮಾಡುವುದು ಎಂಬುದನ್ನು ತಿಳಿದುಕೊಳ್ಳಿ.

ಬೇಕಾಗುವ ಸಾಮಗ್ರಿಗಳು:
ಪನೀರ್ ಕ್ಯೂಬ್ಸ್ – 500 ಗ್ರಾಂ
ಕಡ್ಲೆ ಹಿಟ್ಟು – 1 ಕಪ್
ಅಚ್ಚಖಾರದ ಪುಡಿ – 1 ಚಮಚ
ಅರಿಶಿಣ – 1 ಚಮಚ
ಉಪ್ಪು – ರುಚಿಗೆ ತಕ್ಕಷ್ಟು
ಜೀರಿಗೆ ಪುಡಿ – ಅರ್ಧ ಚಮಚ
ಅಡುಗೆ ಸೋಡಾ – 1 ಚಮಚ
ಎಣ್ಣೆ – ಅಗತ್ಯಕ್ಕೆ ತಕ್ಕಷ್ಟು
ಚಾಟ್ ಮಸಾಲ – ಸ್ವಲ್ಪ

ಮಾಡುವ ವಿಧಾನ:

  • ಮೊದಲಿಗೆ ಒಂದು ಪಾತ್ರೆಯಲ್ಲಿ ಕಡ್ಲೆಹಿಟ್ಟನ್ನು ಹಾಕಿಕೊಂಡು ಅದಕ್ಕೆ ನೀರು, ಅಚ್ಚಖಾರದ ಪುಡಿ, ಜೀರಿಗೆ ಪುಡಿ, ಉಪ್ಪು, ಅರಶಿಣ ಮತ್ತು ಸೋಡಾ ಹಾಕಿಕೊಂಡು ಚನ್ನಾಗಿ ಮಿಕ್ಸ್ ಮಾಡಿಕೊಂಡು ದಪ್ಪ ಮಿಶ್ರಣವನ್ನು ಮಾಡಿಕೊಳ್ಳಿ.
  • ಈಗ ಪನೀರ್ ಕ್ಯೂಬ್ಸ್ ಅನ್ನು ಈ ಮಿಶ್ರಣದಲ್ಲಿ ಚನ್ನಾಗಿ ಅದ್ದಿ ಮಿಶ್ರಣದೊಂದಿಗೆ ಪನೀರ್ ಚನ್ನಾಗಿ ಹೊಂದಿಕೊಳ್ಳುವಂತೆ ಕೋಟಿಂಗ್ ಮಾಡಿ.
  • ಬಳಿಕ ಒಂದು ಬಾಣಾಲೆಯಲ್ಲಿ ಸ್ವಲ್ಪ ಎಣ್ಣೆ ಬಿಸಿಗಿಟ್ಟು, ಕಾದ ಬಳಿಕ ಅದಕ್ಕೆ ಕಡ್ಲೆಹಿಟ್ಟಿನ ಮಿಶ್ರಣದಲ್ಲಿ ಅದ್ದಿದ ಪನೀರ್ ಕ್ಯೂಬ್ಸ್ ಅನ್ನು ಹಾಕಿಕೊಂಡು ಚನ್ನಾಗಿ ಫ್ರೈ ಮಾಡಿಕೊಳ್ಳಿ. ಅದೇ ರೀತಿ ಎಲ್ಲಾ ಪನೀರ್ ಕ್ಯೂಬ್ಸ್‌ಗಳನ್ನು ಕಾಯಿಸಿಕೊಳ್ಳಿ.
  • ನಂತರ ಅದನ್ನು ಎಣ್ಣೆಯಿಂದ ತೆಗೆದು ಅದರ ಮೇಲೆ ಸ್ವಲ್ಪ ಚಾಟ್ ಮಸಾಲ ಪುಡಿಯನ್ನು ಹಾಕಿಕೊಂಡು ಕೆಚಪ್ ಅಥವಾ ಗ್ರೀನ್ ಚಟ್ನಿಯೊಂದಿಗೆ ಬಿಸಿಬಿಸಿ ತಿನ್ನಲು ಕೊಡಿ.
RELATED ARTICLES
- Advertisment -
Google search engine

Most Popular