Tuesday, April 8, 2025
Google search engine

Homeಸ್ಥಳೀಯಯೋಗ ದಿನಾಚರಣೆಗೆ ಪೂರ್ವ ಸಿದ್ದತೆಗಳನ್ನು ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್

ಯೋಗ ದಿನಾಚರಣೆಗೆ ಪೂರ್ವ ಸಿದ್ದತೆಗಳನ್ನು ಕೈಗೊಳ್ಳಿ: ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್

ಮೈಸೂರು: ಜೂನ್ 21 ರ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅರಮನೆ ಮೈದಾನದಲ್ಲಿ ನಡೆಯಲಿದೆ. ಎಲ್ಲಾ ಪೂರ್ವ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ಮಾಡಿಕೊಳ್ಳಿ ಎಂದು ಅಪರ ಜಿಲ್ಲಾಧಿಕಾರಿಗಳಾದ ಕವಿತಾ ರಾಜಾರಾಮ್ ಇಂದು ಆಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮೈಸೂರುನ ನೂತನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಕವಿತಾ ರಾಜಾರಾಮ್ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ 500 ಜನರಿಂದ ಸಾಂಕೇತಿಕ ಯೋಗ ಪ್ರದರ್ಶನ ಹಾಗೂ ನಗರದ ಅರಮನೆಯ ಮೈದಾನದಲ್ಲಿ 12 ಸಾವಿರ ಜನರು ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಜೂನ್ 21 ರಂದು ಬೆಳಗ್ಗೆ 6 ಗಂಟೆಯಿಂದ 8 ಗಂಟೆಯವರೆಗೆ ಯೋಗ ಕಾರ್ಯಕ್ರಮ ನಡೆಯಲಿದ್ದು, ಈ ಬಾರಿ ಮ್ಯಾಟ್ ಗಳನ್ನು ಪೂರೈಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಯೋಗ ದಿನಾಚರಣೆಯಲ್ಲಿ ಭಾಗವಹಿಸುವವರು ಟೀ ಶರ್ಟ್ ಮತ್ತು ಟ್ರ್ಯಾಕ್ ಪ್ಯಾಂಟ್ ಧರಿಸುವುದು ಹಾಗೂ ಯೋಗ ಮ್ಯಾಟ್ ಅವರೇ ತರಬೇಕು ಎಂದು ತಿಳಿಸಿದರು.

ಜೂನ್ 18 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆಯ ರಿಹರ್ಸೆಲ್ ನಡೆಯಲಿದ್ದು ಆಸಕ್ತರು ಆ ದಿನವೂ ಭಾಗವಹಿಸಬಹುದು. ಯೋಗ ನಡೆಯುವ ಸ್ಥಳದಲ್ಲಿ ಆಂಬುಲೆನ್ಸ್, ಶೌಚಾಲಯ, ಫೈಯರ್, ಕುಡಿಯುವ ನೀರು ಹಾಗೂ ಇನ್ನಿತರ ಮೂಲಸೌಕರ್ಯಗಳನ್ನು ಒದಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಯೋಗ ಸಂಸ್ಥೆಗಳು, ಆಯುಷ್ ಇಲಾಖೆ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಎನ್ ಎಸ್ ಎಸ್ ಘಟಕ, ಪದವಿ ಪೂರ್ವ ಶಿಕ್ಷಣ ಇಲಾಖೆ, ಆಯುಷ್ ಯೋಗ ತರಬೇತುದಾರರು ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಯೋಗ ತರಬೇತುದಾರರು ಇವರೆಲ್ಲರು ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದರು.

ಸಭೆಯಲ್ಲಿ ಯೋಗಭ್ಯಾಸದ ಅಭ್ಯಾಸ ಪಟ್ಟಿಯನ್ನು ಅಪರ ಜಿಲ್ಲಾಧಿಕಾರಿಗಳು ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಆಯುಷ್ ಇಲಾಖೆಯ ಅಧಿಕಾರಿ ಡಾ ಪುಷ್ಪ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular