ವರದಿ : ಚಪ್ಪರದಹಳ್ಳಿ ವಿನಯ್ ಕುಮಾರ್
ಬೆಟ್ಟದಪುರ : ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬೆಟ್ಟದಪುರದ ಎಸ್ಎಂಎಸ್ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಯೋಗ ಮಾಡುವ ಮೂಲಕ ಯೋಗದ ಮಹತ್ವವನ್ನು ಸಾರಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಸ್ಥೆಯ ಸಂಸ್ಥಾಪಕ ಬಿ ವಿ ಮಂಜುನಾಥ್ ಯೋಗವು ರೋಗವನ್ನು ದೂರಮಾಡುವ ಶಕ್ತಿಯನ್ನು ಹೊಂದಿದೆ. ಹೀಗಾಗಿ ಪ್ರತಿಯೊಬ್ಬರು ಜೀವನದ ಒಂದು ಭಾಗವಾಗಿ ಯೋಗವನ್ನು ಅಳವಡಿಸಿಕೊಳ್ಳುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಪ್ರಾಂಶುಪಾಲ ರಾಜು,ಪ್ರೌಢಶಾಲಾ ಮುಖ್ಯ ಶಿಕ್ಷಕ ಎಸ್ ಆರ್ ವೆಂಕಟೇಶ್, ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸ್ವಾಮಿ ಡಿ ಎನ್, ಶಿಕ್ಷಕರಾದ ಅಂದಾನಯ್ಯ, ಕುಮಾರ್, ಅಭಿಲಾಶ್, ಶಿವಕುಮಾರ್,ಸುನಿಲ್,ಸೋಮಶೇಖರ್, ಸತೀಶ್, ರೂಪ, ಅನಿಲ್, ಅಂಜನ, ಅನಿತಾ, ಅಶ್ವಿನಿ, ಸೇರಿದಂತೆ ವಿದ್ಯಾರ್ಥಿಗಳು ಹಾಜರಿದ್ದರು.