Friday, April 4, 2025
Google search engine

HomeUncategorizedರಾಷ್ಟ್ರೀಯತಾಜ್ ಮಹಲ್‌ಗೆ ಮಾಲ್ಡೀವ್ಸ್ ಅಧ್ಯಕ್ಷ ಭೇಟಿ: 2 ಗಂಟೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ತಾಜ್ ಮಹಲ್‌ಗೆ ಮಾಲ್ಡೀವ್ಸ್ ಅಧ್ಯಕ್ಷ ಭೇಟಿ: 2 ಗಂಟೆ ಸಾರ್ವಜನಿಕರ ಪ್ರವೇಶ ನಿರ್ಬಂಧ

ಆಗ್ರಾ: ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಮತ್ತು ಅವರ ಪತ್ನಿ ಸಾಜಿದಾ ಮೊಹಮ್ಮದ್‌ ಅವರು ಇಂದು (ಮಂಗಳವಾರ) ಉತ್ತರ ಪ್ರದೇಶದ ಆಗ್ರಾದಲ್ಲಿರುವ ತಾಜ್‌ ಮಹಲ್‌ಗೆ ಭೇಟಿ ನೀಡಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಅವರ ಭೇಟಿಯ ಸಮಯದಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದ್ದು, ಎರಡು ಗಂಟೆಗಳ ಕಾಲ ತಾಜ್‌ ಮಹಲ್‌ ಮುಚ್ಚಲಾಗುವುದು’ ಎಂದು ಆಗ್ರಾದ ಭಾರತೀಯ ಪುರಾತತ್ವ ಸರ್ವೇಕ್ಷಣದ ಅಧಿಕಾರಿ ಹೇಳಿದ್ದಾರೆ.

‘ಆಗ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಯಿಜು ಮತ್ತು ಅವರ ಪತ್ನಿಯನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಪರವಾಗಿ ಸಚಿವ ಯೋಗೇಂದ್ರ ಉಪಾಧ್ಯಾಯ ಅವರು ಸ್ವಾಗತಿಸಲಿದ್ದಾರೆ. ಬಳಿಕ ತಾಜ್‌ ಮಹಲ್‌ಗೆ ಭೇಟಿ ನೀಡಲಿದ್ದಾರೆ’ ಎಂದು ಅವರು ತಿಳಿಸಿದ್ದಾರೆ.

‘ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಮತ್ತು ಅವರ ಪತ್ನಿ ಸಾಜಿದಾ ಮೊಹಮ್ಮದ್‌ ಅವರು ಇಂದು (ಮಂಗಳವಾರ) ತಾಜ್‌ ಮಹಲ್‌ಗೆ ಭೇಟಿ ನೀಡಲಿದ್ದು, ಬೆಳಿಗ್ಗೆ 8 ರಿಂದ 10ರವರೆಗೆ ಸ್ಮಾರಕವನ್ನು ಸಾರ್ವಜನಿಕರಿಗೆ ಮುಚ್ಚಲಾಗುವುದು’ ಎಂದು ಆಗ್ರಾದ ಪುರಾತತ್ವ ಶಾಸ್ತ್ರಜ್ಞ ರಾಜ್‌ ಕುಮಾರ್‌ ಪಟೇಲ್‌ ಹೇಳಿದ್ದಾರೆ.

ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಅವರು ನಾಲ್ಕು ದಿನಗಳ ಭಾರತ ಪ್ರವಾಸ ಕೈಗೊಂಡಿದ್ದಾರೆ. ಇಂದು ಆಗ್ರಾ ಮತ್ತು ಮುಂಬೈಗೆ ಹಾಗೂ ಬುಧವಾರ ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಗುರುವಾರ ಮಾಲೆಗೆ ಹಿಂದಿರುಗಲಿದ್ದಾರೆ.

RELATED ARTICLES
- Advertisment -
Google search engine

Most Popular