Friday, April 18, 2025
Google search engine

Homeರಾಜ್ಯಕುಂಭಮೇಳ ಕಾಲ್ತುಳಿತದಲ್ಲಿ ಸಾವಿನ ಸಂಖ್ಯೆಯ ನಿಖರವಾದ ವರದಿ ಕೊಡಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ಕುಂಭಮೇಳ ಕಾಲ್ತುಳಿತದಲ್ಲಿ ಸಾವಿನ ಸಂಖ್ಯೆಯ ನಿಖರವಾದ ವರದಿ ಕೊಡಿ: ಮಲ್ಲಿಕಾರ್ಜುನ ಖರ್ಗೆ ಒತ್ತಾಯ

ನವದೆಹಲಿ:ಹಾ ಕುಂಭಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 1,000 ಜನ ಪ್ರಾಣ ಕಳೆದುಕೊಂಡಿದ್ದಾರೆ ಎಂದು ನಾನು ಹೇಳಿದ್ದೇನೆ. ಒಂದು ವೇಳೆ ನಾನು ಹೇಳಿದ್ದು ತಪ್ಪು ಎನ್ನುವುದಾದರೆ, ಸಾವಿನ ಸಂಖ್ಯೆಯ ನಿಖರವಾದ ವರದಿಯನ್ನು ಬಿಡುಗಡೆ ಮಾಡಲಿ ಎಂದು ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ರಾಜ್ಯಸಭೆಯಲ್ಲಿಂದು ರಾಷ್ಟ್ರಪತಿಗಳ ಭಾಷಣದ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಜನವರಿ 29ರಂದು ಮಹಾ ಕುಂಭಮೇಳದ ಕಾಲ್ತುಳಿತದಲ್ಲಿ ಮಡಿದ ʻಸಾವಿರಾರುʼ ಜನರಿಗೆ ಶ್ರದ್ಧಾಂಜಲಿ ಸಲ್ಲಿಸುವುದಾಗಿ ತಿಳಿಸಿದ್ರು. ಈ ವೇಳೆ ಸಭಾಪತಿ ಜಗದೀಪ್ ಧನಕರ್ ಅವರು, ಹೇಳಿಕೆಯನ್ನು ಹಿಂತೆಗೆದುಕೊಳ್ಳುವಂತೆ ಹೇಳಿದರು.

ಬಳಿಕ ಮಾತು ಮುಂದುವರಿಸಿದ ಖರ್ಗೆ ಅವರು, ಮಹಾಕುಂಭದಲ್ಲಿ ನಡೆದ ಕಾಲ್ತುಳಿತದ ಬಗ್ಗೆ ನಾನು ಮಾತನಾಡಲು ಬಯಸುತ್ತೇನೆ. ತುಂಬಾ ಜನರು ಅಲ್ಲಿ ಪ್ರಾಣ ಕಳೆದುಕೊಂಡರು. ನಾನು ಅಲ್ಲಿ 1 ಸಾವಿರ ಜನರು ಸಾವನ್ನಪ್ಪಿದ್ದಾರೆ ಎಂದು ನಾನು ಹೇಳಿದ್ದೇನೆ. ನಾನು ಹೇಳಿದ್ದು ತಪ್ಪು ಎನ್ನುವುದಾದರೆ ಕನಿಷ್ಠ ಅಲ್ಲಿ ಆಗಿರುವ ಸಾವುಗಳ ಸಂಖ್ಯೆಯ ನಿಖರವಾದ ವರದಿ ಕೊಡಿ ಎಂದು ಆಗ್ರಹಿಸಿದರು.

RELATED ARTICLES
- Advertisment -
Google search engine

Most Popular