Saturday, October 4, 2025
Google search engine

Homeರಾಜ್ಯಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

ಈ ಕುರಿತು ಎಐಸಿಸಿ ಟ್ವೀಟ್ ಮಾಡಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಅವರು ಚೆನ್ನಾಗಿದ್ದಾರೆ ಮತ್ತು ನಿಮ್ಮೆಲ್ಲರ ಶುಭ ಹಾರೈಕೆಗಳಿಗೆ ಧನ್ಯವಾದ ಹೇಳಲು ಬಯಸುತ್ತೇವೆ. ಅವರು ಸಲಹೆಯಂತೆ ಶೀಘ್ರದಲ್ಲೇ ತಮ್ಮ ಚಟುವಟಿಕೆಗಳನ್ನು ಪುನರಾರಂಭಿಸಲು ಎದುರು ನೋಡುತ್ತಿದ್ದಾರೆ. ಎಲ್ಲರಿಗೂ ಅವರ ಶುಭ ಹಾರೈಕೆ ಮತ್ತು ಬೆಂಬಲಕ್ಕಾಗಿ ನಾವು ಧನ್ಯವಾದಗಳನ್ನು ಅರ್ಪಿಸುತ್ತೇವೆ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಅವರಿಗೆ ಮೈನರ್ ಸರ್ಜರಿಯನ್ನು ವೈದ್ಯರು ಮಾಡಿದ್ದು, ಇದು ಯಶಸ್ವಿಯಾಗಿದೆ. ಹೀಗಾಗಿ ನಿನ್ನೆ ಸಂಜೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಬೆಂಗಳೂರಿನ ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ಅನಾರೋಗ್ಯದ ಕಾರಣ ದಾಖಲಾಗಿದ್ದರು. ಅವರಿಗೆ ಮೈನರ್ ಸರ್ಜರಿ ಮಾಡಿ ಪರ್ಮನೆಂಟ್ ಫೇಸ್ ಮೇಕರ್ ಅನ್ನು ಜಯದೇವ ಆಸ್ಪತ್ರೆಯ ವೈದ್ಯರು ಅಳವಡಿಸಿದ್ದಾರೆ. ಜಯದೋವ ಹೃದ್ರೋಗ ಆಸ್ಪತ್ರೆಯ ವೈದ್ಯರಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಯಶಸ್ವಿಯಾಗಿ ಸರ್ಜರಿ ಮಾಡಲಾಗಿದೆ. ಸದ್ಯ ಸರ್ಜರಿಯ ಬಳಿಕ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ.

RELATED ARTICLES
- Advertisment -
Google search engine

Most Popular